* ಕರ್ನಾಟಕ ಸೇರಿದಂತೆ 11 ರಾಜ್ಯಗಳಲ್ಲಿ ಸಂಚರಿಸಲಿರುವ 9 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 24 ರಂದು ಏಕಕಾಲಕ್ಕೆ ಚಾಲನೆ ನೀಡಿದರು.* 9 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ -- 11 ರಾಜ್ಯಗಳಲ್ಲಿ ವೇಗದ ಸಂಪರ್ಕವನ್ನು ಒದಗಿಸುತ್ತವೆ.* ದೇಶದಲ್ಲಿ 25 ವಂದೇ ಭರತ್ ರೈಲುಗಳು ಕಾರ್ಯಾಚರಣೆ ನಡೆಸುತ್ತಿದ್ದು, ಸದ್ಯ 9 ರೈಲುಗಳ ಆರಂಭದೊಂದಿದೆ ಒಟ್ಟು 34 ವಂದೇ ಭರತ್ ರೈಲುಗಳು ಕಾರ್ಯಾಚರಣೆ ಆರಂಭವಾಗಿದೆ.*  9 ವಂದೇ ಭರತ್ ರೈಲುಗಳಲ್ಲಿ ಪ್ರಯಾಣಿಕರಿಗೆ ಹಲವಾರು ಸೌಲಭ್ಯ ಕಲ್ಪಿಸಲಾಗಿದ್ದು, ಸೀಟುಗಳ ಕೆಳಗೆ ಮೊಬೈಲ್ ಚಾರ್ಜ್ ಸೌಲಭ್ಯ, ಸೀಟುಗಳ ಕೆಳಗೆ ಕಾಲು ಇಡಲು ಹೆಚ್ಚಿನ ಸ್ಥಳಾವಕಾಶ, ವಿಶಾಲವಾದ ವಾಷ್ ಬೇಸಿನ್ ಸೌಲಭ್ಯ, ಶೌಚಾಲಯದಲ್ಲಿ ಹೆಚ್ಚಿನ ಬೆಳಕು ನೀಡುವ ವಿದ್ಯುತ ಸೌಲಭ್ಯ ಅಳವಡಿಸಲಾಗಿದೆ ಎಂದು ರೈಲ್ವೆ ಇಲಾಖೆಯು ತಿಳಿಸಿದೆ.* 9 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಮಾರ್ಗ :ಉದಯಪುರ - ಜೈಪುರ ವಂದೇ ಭಾರತ್ ಎಕ್ಸ್‌ಪ್ರೆಸ್ತಿರುನಲ್ವೇಲಿ-ಮದುರೈ-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ಹೈದರಾಬಾದ್-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ವಿಜಯವಾಡ - ಚೆನ್ನೈ (ರೇಣಿಗುಂಟಾ ಮೂಲಕ) ವಂದೇ ಭಾರತ್ ಎಕ್ಸ್‌ಪ್ರೆಸ್ಪಾಟ್ನಾ - ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್ಕಾಸರಗೋಡು - ತಿರುವನಂತಪುರಂ ವಂದೇ ಭಾರತ್ ಎಕ್ಸ್‌ಪ್ರೆಸ್ರೂರ್ಕೆಲಾ - ಭುವನೇಶ್ವರ್ - ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್ರಾಂಚಿ - ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್ಜಾಮ್‌ನಗರ-ಅಹಮದಾಬಾದ್ ವಂದೇ ಭಾರತ್ ಎಕ್ಸ್‌ಪ್ರೆಸ್