Job Description: * 12 ಚೀತಾಗಳು ವಾಯುಪಡೆಯ ವಿಶೇಷ ವಿಮಾನದಲ್ಲಿ ಶನಿವಾರ ಫೆ.18 ರಂದು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ತರಲಾಗಿದೆ. ಈ ಚೀತಾಗಳನ್ನು ಮಧ್ಯ ಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೊ ರಾಷ್ಟ್ರೀಯ ಉದ್ಯಾನಕ್ಕೆ (ಕೆಎನ್‌ಪಿ) ಬಿಡಲಾಯಿತು. ಚೀತಾಗಳನ್ನು ಕ್ವಾರಂಟೈನ್ ಆವರಣದಲ್ಲಿ ಇರಿಸಲಾಗಿದೆ.* ಗ್ವಾಲಿಯರ್‌ನಿಂದ ಕೆಎನ್‌ಪಿಗೆ ಬಂದ ಚೀತಾಗಳನ್ನು ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್ ಮತ್ತು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದರ್‌ ಯಾದವ್‌ ಅವರು ಉದ್ಯಾನದ ಕ್ವಾರಂಟೈನ್ ಆವರಣಕ್ಕೆ ಬಿಡುಗಡೆ ಮಾಡಿದರು.