* ಪ್ರತಿ ವರ್ಷ ಜ.26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಇತಿಹಾಸದಲ್ಲೇ ಮೊದಲ ಬಾರಿಗೆ ರೈತ ದಂಪತಿಗಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ. ಕರ್ತವ್ಯ ಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಈ ಬಾರಿ 1,500 ರೈತ ದಂಪತಿಗಳನ್ನು ದೇಶದ ವಿವಿಧ ಭಾಗಗಳಿಂದ ಆರಿಸಿ ಆಹ್ವಾನ ನೀಡಲಾಗಿದೆ. * ಕಳೆದ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೂ 500 ರೈತರನ್ನು ವಿಶೇಷ ಆಹ್ವಾನಿತರಾಗಿ ಆಯ್ಕೆ ಮಾಡಲಾಗಿತ್ತು.* ಇದರಲ್ಲಿ ವಿವಿಧ ರೈತ ಉತ್ಪಾದಕರ ಸಂಘದ ಪ್ರತಿನಿಧಿಗಳು ಮತ್ತು ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯ ಫಲಾನುಭವಿಗಳು ಮತ್ತು ಸರ್ಕಾರದ ವಿವಿಧ ಸಣ್ಣ ನೀರಾವರಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ.