* ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್‌ಗೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಆಗಸ್ಟ್ 22-24 ರವರೆಗೆ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ದಕ್ಷಿಣ ಆಫ್ರಿಕಾ ದೇಶದ ಅಧ್ಯಕ್ಷ ಮಟಮೆಲಾ ಸಿರಿಲ್ ರಮಾಫೋಸಾ ಅವರ ಆಹ್ವಾನದ ಮೇರೆಗೆ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.* ಬ್ರಿಕ್ಸ್ ಇದು ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾದ ವಿಶ್ವ ಆರ್ಥಿಕತೆಯ ಒಂದು ಗುಂಪು. ಬ್ರಿಕ್ಸ್ ಶೃಂಗಸಭೆ ಆಗಸ್ಟ್ 22-24 ರವರೆಗೆ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ.* ಇದು ಪ್ರಧಾನಿ ಮೋದಿಯವರ ಮೂರನೇ ಭೇಟಿಯಾಗಿದೆ ಮತ್ತು ಈ ಪ್ರವಾಸವು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ರಾಜತಾಂತ್ರಿಕ ಸಂಬಂಧದ 30 ನೇ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ.* ಈ (2023ರ) ವರ್ಷದ 15 ನೇ ಬ್ರಿಕ್ಸ್ ಶೃಂಗಸಭೆ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿದೆ. ಈ ವರ್ಷದ ಶೃಂಗಸಭೆಯ ವಿಷಯವೆಂದರೆ : "ಬ್ರಿಕ್ಸ್ ಮತ್ತು ಆಫ್ರಿಕಾ: ಪರಸ್ಪರ ವೇಗವರ್ಧಿತ ಬೆಳವಣಿಗೆ, ಸುಸ್ಥಿರ ಅಭಿವೃದ್ಧಿ ಮತ್ತು ಅಂತರ್ಗತ ಬಹುಪಕ್ಷೀಯತೆಗಾಗಿ ಪಾಲುದಾರಿಕೆ" ಆಗಿದೆ.