* 2020ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟವಾಗಿದ್ದು, ಪ್ರಜ್ವಲ್ ದೇವರಾಜ್ ಅವರು 'ಜಂಟಲ್‌ಮ್ಯಾನ್' ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ಮತ್ತು ಅಕ್ಷತಾ ಪಾಂಡವಪುರ ಅವರು 'ಪಿಂಕಿ ಎಲ್ಲಿ' ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.* ಅತ್ಯುತ್ತಮ ಸಿನಿಮಾ ವಿಭಾಗದಲ್ಲಿ 'ಪಿಂಕಿ ಎಲ್ಲಿ, ಚಿತ್ರ ಆಯ್ಕೆಯಾಗಿದ್ದರೆ, ವರ್ಣಪಟಲ ಚಿತ್ರಕ್ಕೆ 2ನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಸಿಕ್ಕಿದೆ. ಹರಿವ ನದಿಗೆ ಮೈಯೆಲ್ಲ ಕಾಲು ಚಿತ್ರಕ್ಕೆ ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ.* ಅತ್ಯುತ್ತಮ ನಾಯಕ ಮತ್ತು ನಾಯಕಿಗೆ 20 ಸಾವಿರ ರೂಪಾಯಿಗಳ ನಗದು ಮತ್ತು 100 ಗ್ರಾಂ ಬೆಳ್ಳಿ ಪದಕ ನೀಡಲಾಗುವುದು. ಅತ್ಯುತ್ತಮ ಚಿತ್ರಕ್ಕಾಗಿ ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ 50 ಗ್ರಾಂ ಚಿನ್ನದ ಪದಕ ಒಳಗೊಂಡಿದೆ.* 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯ ಮುಂದಾಳತ್ವವನ್ನು ಬಿ.ಎಸ್. ಲಿಂಗದೇವರು ವಹಿಸಿಕೊಂಡಿದ್ದರು. ಈ ಆಯ್ಕೆ ಸಮಿತಿ ಸುಮಾರು 66 ಸಿನಿಮಾಗಳನ್ನು ವೀಕ್ಷಣೆ ಮಾಡಿ ಹಲವು ವಿಭಾಗಗಳಿಗೆ ಸಿನಿಮಾಗಳನ್ನು ಆಯ್ಕೆ ಮಾಡಿದ್ದಾರೆ.2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿ* ಅತ್ಯುತ್ತಮ ನಟ: ಪ್ರಜ್ವಲ್ ದೇವರಾಜ್ (ಜಂಟಲ್‌ಮನ್)* ಅತ್ಯುತ್ತಮ ನಟಿ: ಅಕ್ಷತಾ ಪಾಂಡವಪುರ (ಪಿಂಕಿ ಎಲ್ಲಿ)* ಅತ್ಯುತ್ತಮ ಚಿತ್ರ: ಪಿಂಕಿ ಎಲ್ಲಿ* 2ನೇ ಅತ್ಯುತ್ತಮ ಚಿತ್ರ: ವರ್ಣಪಟಲ* 3ನೇ ಅತ್ಯುತ್ತಮ ಚಿತ್ರ: ಹರಿವ ನದಿಗೆ ಮೈಯೆಲ್ಲಾ ಕಾಲು* ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಗಿಳಿಯು ಪಂಜರದೊಳಿಲ್ಲ ಮತ್ತು ಈ ಮಣ್ಣು* ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಫೋರ್ ವಾಲ್ಸ್* ಅತ್ಯುತ್ತಮ ಮಕ್ಕಳ ಚಿತ್ರ: ಪದಕ* ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ನೀಲಿ ಹಕ್ಕಿ* ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಚಿತ್ರ: ಜೀಟಿಗೆ* ಅತ್ಯುತ್ತಮ ಸಂಗೀತ ನಿರ್ದೇಶಕ: ಗಗನ್ ಬಡೇರಿಯಾ* ಅತ್ಯುತ್ತಮ ಸಂಕಲನ: ನಾಗೇಂದ್ರ* ಅತ್ಯುತ್ತಮ ಪೋಷಕ ನಟ: ರಮೇಶ್ ಪಂಡಿತ್* ಅತ್ಯುತ್ತಮ ಪೋಷಕ ನಟಿ: ಮಂಜುಳಮ್ಮ* ಅತ್ಯುತ್ತಮ ಕಥೆ: ಶಶಿಕಾಂತ್ ಗಟ್ಟಿ* ಅತ್ಯುತ್ತಮ ಚಿತ್ರಕಥೆ: ರಾಘವೇಂದ್ರ ಕುಮಾರ್* ಅತ್ಯುತ್ತಮ ಸಂಭಾಷಣೆ: ವೀರಪ್ಪ ಮರಳವಾಡಿ* ಅತ್ಯುತ್ತಮ ಛಾಯಾಗ್ರಹಣ: ಅಶೋಕ್ ಕಶ್ಯಪ್ಪ್ರಶಸ್ತಿ ಮೊತ್ತ- ಮೊದಲನೇ ಅತ್ಯುತ್ತಮ ಚಿತ್ರ: ₹1 ಲಕ್ಷ ನಗದುಹಾಗೂ 50 ಗ್ರಾಂ ಚಿನ್ನದ ಪದಕ- ಎರಡನೇ ಅತ್ಯುತ್ತಮ ಚಿತ್ರ: ₹75 ಸಾವಿರ ನಗದುಹಾಗೂ 100 ಗ್ರಾಂ ಬೆಳ್ಳಿ ಪದಕ- ಮೂರನೇ ಅತ್ಯುತ್ತಮ ಚಿತ್ರ: ₹50 ಸಾವಿರ ನಗದುಹಾಗೂ 100 ಗ್ರಾಂ ಬೆಳ್ಳಿ ಪದಕ- ವಿಶೇಷ ಸಾಮಾಜಿಕ ಕಾಳಜಿಯ ಪ್ರಶಸ್ತಿ: ₹75 ಸಾವಿರ ನಗದುಹಾಗೂ 100 ಗ್ರಾಂ ಬೆಳ್ಳಿ ಪದಕ- ಅತ್ಯುತ್ತಮ ನಟ ಹಾಗೂ ಅತ್ಯುತ್ತಮ ನಟಿ: ₹20 ಸಾವಿರ ನಗದುಹಾಗೂ 100 ಗ್ರಾಂ ಬೆಳ್ಳಿ ಪದಕ