* 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದ್ದು, ಯುವಕರು, ಮಹಿಳೆಯರು, ತರನ್ನು ದೃಷ್ಟಿಯಲ್ಲಿಟ್ಟುಕೊಂಡು ಚುನವಾಣೆ ವರ್ಷದಲ್ಲಿ ಲೇಖಾನುದಾನಕ್ಕೆ ಅನುಮತಿ ಯಾವುದೇ ಹೊಸ ಯೋಜನೆಗಳನ್ನು ಘೋಷಣೆ ಮಾಡಿಲ್ಲ. * ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ ಪಡೆದು ಲೋಕಸಭೆಗೆ ಆಗಮಿಸಿ, 59 ನಿಮಿಷ 15 ಸೆಕೆಂಡ್‌ಗಳಲ್ಲಿ ಅತ್ಯಂತ ಕಡಿಮೆ ಅವಧಿಯ ಬಜೆಟ್ ಭಾಷಣ ಮುಗಿಸಿದರು. * ಸರ್ಕಾರವು 25 ಕೋಟಿ ಬಡವರಿಗೆ ನೆರವಾಗಿದ್ದು, ನೇರ ನಗದು ವರ್ಗಾವಣೆ ಮೂಲಕ 34 ಲಕ್ಷ ಕೋಟಿ ರೂ. ಮೊತ್ತವನ್ನು ಬ್ಯಾಂಕ್‌ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. 24ನೇ ಹಣಕಾಸು ವರ್ಷದ ಅಂದಾಜು ವೆಚ್ಚವನ್ನು 44.90 ಲಕ್ಷ ಕೋಟಿ ರೂ.ಗೆ ಪರಿಷ್ಕರಿಸಲಾಗಿದ್ದು, ಮಾರ್ಕೆಟಿಂಗ್ ಮತ್ತು ಬ್ರಾಂಡಿಂಗ್ ಸೇರಿ ಖಾಸಗಿ, ಸಾರ್ವಜನಿಕ ಹೂಡಿಕೆಯನ್ನು ಸರ್ಕಾರವು ಉತ್ತೇಜಿಸುತ್ತದೆ ಎಂದರು.* 40 ಸಾವಿರ ಹಳೆಯ ರೀತಿಯ ರೈಲ್ವೆ ಬೋಗಿಗಳನ್ನು ವಂದೇ ಭಾರತ್ ಬೋಗಿಗಳಾಗಿ ಪರಿವರ್ತನೆ ಮಾಡೋದಾಗಿ ಹೇಳಿದೆ. ಉಡಾನ್ ಯೋಜನೆಗೆ 517 ಹೊಸ ಮಾರ್ಗ ರೂಪಿಸುವ ಮೂಲಕ ಸಣ್ಣ ನಗರಗಳಿಗೂ ವಿಮಾನಯಾನ ಸೇವೆ ಒದಗಿಸುವ ಇರಾದೆ ಸರ್ಕಾರಕ್ಕಿದೆ.* ಸಚಿವೆ ನಿರ್ಮಲಾ ಸೀತಾರಾಮನ್ ಸತತ 5 ವಾರ್ಷಿಕ ಬಜೆಟ್ 1 ಮಂಧ್ಯತರ ಬಜೆಟ್ ಮಂಡಿಸುವ ಮೂಲಕ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಮುರಿಯಲಿದ್ದಾರೆ. ಮಾಜಿ ಹಣಕಾಸು ಸಚಿವರಾದ ಡಾ.ಮನಮೋಹನ್ ಸಿಂಗ್, ಅರುಣ್ ಜೇಟ್ಲಿ, ಪಿ.ಚಿದಂಬರಂ ಮತ್ತು ಯಶವಂತ್ ಸಿನ್ಹಾ ಅವರ ದಾಖಲೆಯನ್ನು ಮುರಿಯಲಿದ್ದಾರೆ.* 2019 ರಿಂದ 5 ಪೂರ್ಣ ಬಜೆಟ್ ಮಂಡಿಸಿರುವ ನಿರ್ಮಲಾ ಸೀತಾರಾಮನ್ ಅವರು ದೇಶದ ಮೊದಲ ಪೂರ್ಣಾವಧಿ ಮಹಿಳಾ ವಿತ್ತ ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. * 2024-25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ಮಂಡನೆಯ ವಿಶೇಷತೆಗಳು- ಮೋದಿ ಸರ್ಕಾರದ 10ನೇ ಬಜೆಟ್- ನಿರ್ಮಲಾ ಸೀತಾರಾಮನ್‌ಗೆ 6ನೇ ಬಜೆಟ್- ಪ್ರಸಕ್ತ ಕೇಂದ್ರ ಸರ್ಕಾರದ ಕೊನೆಯ ಬಜೆಟ್- ಹೊಸ ಸಂಸತ್ತಿನಲ್ಲಿ ಮೊದಲ ಬಜೆಟ್ - 59 ನಿಮಿಷದಿಂದ 15 ಸೆಕೆಂಡಿನ ಕಡಿಮೆ ಅವಧಿ ಬಜೆಟ್ಮುಂದುವರೆಯುದು.