* 2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,71,383 ಕೋಟಿ ರೂ.ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ.* ಬಜೆಟ್ ನ ಮುಖ್ಯಅಂಶಗಳು :- ಕೇಂದ್ರ ಮತ್ತು ರಾಜ್ಯ ಸರಕಾರದ ಅಧೀನದಲ್ಲಿರುವ ಎಲ್ಲ ಸಂಸ್ಥೆಗಳ ನೇಮಕಾತಿ ಅಧಿಸೂಚನೆಯನ್ನು ಒಂದೇ ಜಾಲತಾಣದಲ್ಲಿ ಪ್ರಕಟ.- ಎಲ್ಲಾ ಇಲಾಖೆಗಳ ನೇಮಕಾತಿಯಲ್ಲು ಕ್ರೀಡಾಪಟುಗಳಿಗೆ 2% ರಷ್ಟು ಹುದ್ದೆಗಳು ಮೀಸಲು- ಗ್ರಾಮಿಣ ಭಾಗದ ರಸ್ತೆ ಸಂಪರ್ಕ ಜಾಲ ಬಲಪಡಿಸಲು ಪ್ರಗತಿಪಥ ಕಲ್ಯಾಣ ಕರ್ನಾಟಕ ರಸ್ತೆಗಳ ಅಭಿವೃದ್ಧಿ' 'ಕಲ್ಮಾಣ ವಥ'-  ರಾಜ್ಯದ ಕ್ರೀಡಾಪಟುಗಳಿಗೆ ಪ್ರತಿವರ್ಷ ರಾಜ್ಯಮಟ್ಟದ ಒಲಿಂಪಿಕ್ಸ್ ಮತ್ತು 14 ವರ್ಷದೊಳಗಿನವರಿಗೆ ರಾಜ್ಯ ಕೌಶಲ ಒಲಂಪಿಕ್ - ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುವ ಪ್ರಶಿಕ್ಷಣಾರ್ಥಿಗಳನ್ನು ಕೌಶಲ ಸ್ಪರ್ಧೆಗಳಿಗೆ ಸಿದ್ಧಪಡಿಸಲು ರಾಜ್ಯ ಕೌಶಲ ಒಲಂಪಿಕ್ - ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವವರು ಗಾಯಗೊಂಡರೆ ರಾಜ್ಯ ಸರಕಾರದ ವತಿಯಿಂದ ಆರೋಗ್ಯ ವಿಮೆ ಯೋಜನೆ- ಕಲಬುರಗಿಯಲ್ಲಿ ಪಿಪಿಪಿ ಮಾದರಿಯ ಮೆಗಾ ಟೆಕ್ಸ್‌ ಟೈಲ್ ಪಾರ್ಕ್, 1 ಲಕ್ಷ ಜನರಿಗೆ ನೇರ ಉದ್ಯೋಗಾವಕಾಶ.- 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಷ್ಟಿ * ರಾಜ್ಯದಲ್ಲಿ ಯುವಜನರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಸಲುವಾಗಿ ಐಟಿಐ ಮತ್ತು ಜಿಟಿಟಿಸಿ ವಿದ್ಯಾರ್ಥಿಗಳಿಗೆ 5 ಕೋಟಿ ವೆಚ್ಚದಲ್ಲಿ ಆಂಗ್ಲ ಮತ್ತು ಸಂವಹನ ಕೌಶಲ ತರಬೇತಿ ನೀಡುವ ಮೂಲಕ 40,000ಕ್ಕೂ ಹೆಚ್ಚು ಅಪ್ರೆಂಟಿಸ್‌ಗಳಿಗೆ ಪ್ರಯೋಜನವಾಗಲಿದೆ. * ಕೈಗಾರಿಕಾ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯ ಪೂರೈಸಲು ಬಳ್ಳಾರಿಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕಲಬುರಗಿ, ಕೊಪ್ಪಳದ ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಜಿಟಿಟಿಸಿ ಬಹು ಕೌಶಲ ಆಭಿವೃದ್ಧಿ ಕೇಂದ್ರಗಳನ್ನು ನಿರ್ಮಿಸಲಾಗುವುದು.