* ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರನ್ ಅವರು 2024ರ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವುದರೊಂದಿಗೆ ಭಾರತ ಮತ್ತು ಫ್ರಾನ್ಸ್ ನಡುವಿನ ಬೃಹತ್ ರಕ್ಷಣಾ ಒಪ್ಪಂದಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.* 26 ರಫೇಲ್ ಯುದ್ಧ ವಿಮಾನ ಖರೀದಿ ಮತ್ತು ಫ್ರಾನ್ಸ್‌ ನ ತಂತ್ರಜ್ಞಾನ ಹಂಚಿಕೆಯೊಂದಿಗೆ ಭಾರತದಲ್ಲಿ ನಿರ್ಮಾಣವಾಗಲಿರುವ ಮೂರು ಜಲಾಂತರ್ಗಾಮಿ ಯೋಜನೆಗಳು ಅಂತಿಮಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.* ಜ. 26ರ 75ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬರಲಿರುವ ಇಮ್ಯಾನುಯಲ್ ಮ್ಯಾಕ್ರನ್ ಅವರು ಸೇನಾ ಪಥಸಂಚಲನದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ.