* 2024ರ ರಾಷ್ಟ್ರೀಯ ಗ್ರಾಹಕ ದಿನದಂದು ಗ್ರಾಹಕ ವ್ಯವಹಾರಗಳ ಇಲಾಖೆಯು ಗ್ರಾಹಕರ ರಕ್ಷಣೆಯನ್ನು ಹೆಚ್ಚಿಸುವ ಮತ್ತು ಮೋಸಗೊಳಿಸುವ ಆನ್ಲೈನ್ ಅಭ್ಯಾಸಗಳನ್ನು ಪರಿಹರಿಸುವ ಉದ್ದೇಶದಿಂದ ಮೂರು ಹೊಸ ಅಪ್ಲಿಕೇಶನ್ಗಳನ್ನು ಬಿಡುಗಡೆ ಮಾಡಿದೆ.* ಈ ಅಪ್ಲಿಕೇಶನ್ಗಳು ಡಿಜಿಟಲ್ ಯುಗದಲ್ಲಿ ಗ್ರಾಹಕರನ್ನು ಸದೃಢಗೊಳಿಸುವ ದೊಡ್ಡ ಉಪಕ್ರಮದ ಭಾಗವಾಗಿದೆ.* ಇ-ಕಾಮರ್ಸ್ನಲ್ಲಿನ ಡಾರ್ಕ್ ಪ್ಯಾಟರ್ನ್ಗಳಂತಹ ಉದಯೋನ್ಮುಖ ಸವಾಲುಗಳನ್ನು ಪರಿಹರಿಸುತ್ತದೆ.* 1986ರಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆಯನ್ನು ಅಂಗೀಕರಿಸಲಾಯಿತು. ಈ ಕಾಯ್ದೆಗೆ ಡಿಸೆಂಬರ್ 24ರಂದು ರಾಷ್ಟ್ರಪತಿಗಳ ಒಪ್ಪಿಗೆ ಸಿಕ್ಕಿತು.* ಉತ್ಪಾದಕರು ಅಥವಾ ಮಾರಾಟಗಾರರಿಂದಾಗುವ ಮೋಸ, ವಂಚನೆ, ಶೋಷಣೆಗಳಿಂದ ಗ್ರಾಹಕರಿಗೆ ರಕ್ಷಣೆ ಒದಗಿಸುವ ಉದ್ದೇಶದಿಂದ ಈ ಕಾಯಿದೆ ಜಾರಿಗೆ ಬಂದಿದೆ. ಅಂದಿನಿಂದ ಈ ದಿನದ ನೆನಪಿನಲ್ಲಿ ಪ್ರತಿವರ್ಷ ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.* ಗ್ರಾಹಕ ಸಂರಕ್ಷಣಾ ಕಾಯ್ದೆಯೂ ದೋಷಪೂರಿತ ಸರಕುಗಳು, ವ್ಯಾಪಾರದಲ್ಲಿ ಮೋಸ, ವಂಚನೆಯಿಂದ ಗ್ರಾಹಕರನ್ನು ರಕ್ಷಿಸುವ ಕೆಲಸ ಮಾಡುತ್ತದೆ.* ಈ ಗ್ರಾಹಕ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಸುರಕ್ಷತೆಯ ಹಕ್ಕು, ಆಯ್ಕೆ ಮಾಡುವ ಹಕ್ಕು, ಮಾಹಿತಿ ಪಡೆಯುವ ಹಕ್ಕು, ಕೇಳುವ ಹಕ್ಕು, ಪರಿಹಾರ ಹುಡುಕುವ ಹಕ್ಕು ಮತ್ತು ಗ್ರಾಹಕ ಶಿಕ್ಷಣದ ಹಕ್ಕುಗಳು ಸೇರಿದಂತೆ ಒಟ್ಟು ಆರು ಹಕ್ಕುಗಳು ಸೇರಿವೆ.