* ಅಮೆರಿಕದ ಲಾಸ್ ಏಂಜಲಿಸ್ನಲ್ಲಿ 2028ರಲ್ಲಿ ನಡೆಯಲಿರುವ ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್ಗೆ ಟಿ20 ಕ್ರಿಕೆಟ್ ಆಟ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತಗೊಂಡಿದೆ.* ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ 2028ರ ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್‌ಗೆ ಫ್ಲ್ಯಾಗ್ ಫುಟ್ ಬಾಲ್‌, ಬೇಸ್‌ಬಾಲ್ ಮತ್ತು ಸಾಫ್ಟ್‌ ಬಾಲ್ ಜೊತೆಗೆ ಕ್ರಿಕೆಟ್ ಅನ್ನು ಸೇರಿಸಲು ನಿರ್ಧರಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.* ಅಕ್ಟೋಬರ್ 15 ರಂದು ಮುಂಬೈನಲ್ಲಿ ನಡೆಯಲಿರುವ 141ನೇ ಅಂತಾರಾಷ್ಟ್ರೀಯ ಒಲಂಪಿಕ್ ಸಮಿತಿಯ ಅಧಿವೇಶನದಲ್ಲಿ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು 'ದಿ ಗಾರ್ಡಿಯನ್ ವರದಿ ಮಾಡಿದೆ.* ಕ್ರಿಕೆಟ್ ಈ ಮುನ್ನ 1990ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪದಕ ಸ್ಪರ್ಧೆಯಾಗಿತ್ತು ಮತ್ತು ಆಗ ಇಂಗ್ಲೆಂಡ್-ಫ್ರಾನ್ಸ್ ಪುರುಷರ ತಂಡಗಳ ನಡುವೆ ಏಕೈಕ ಪಂದ್ಯ ನಡೆದಿತ್ತು.* ಭಾರತವು ಕ್ರೀಡೆಗಳ ಅತಿ ದೊಡ್ಡ ಮಾರುಕಟ್ಟೆಯಾಗಿದೆ. 2028ರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಗೊಂಡ ನಂತರ ದೇಶದಲ್ಲಿ ICC ಪ್ರಸಾರ ಒಪ್ಪಂದದ ಮೌಲ್ಯವು ಗಣನೀಯವಾಗಿ ಹೆಚ್ಚಾಗುತ್ತದೆ. 2024ರ ಒಲಿಂಪಿಕ್ಸ್‌ಗಾಗಿ 15.6 ಮಿಲಿಯನ್ ಪೌಂಡ್ ಗಳಿಂದ 2028ರ ಆವೃತ್ತಿಯಲ್ಲಿ ಕ್ರಿಕೆಟ್ ಭಾರತದಲ್ಲಿ ಪ್ರಸಾರ ಒಪ್ಪಂದವು 150 ಮಿಲಿಯನ್ ಪೌಂಡ್‌ಗಳನ್ನು ಪಡೆಯಬಹುದು ಎಂದು ವರದಿಯಾಗಿದೆ.