* ಭಾರತೀಯ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನವನ್ನು ಗುರುತಿಸಲು ಭಾರತ ಸರ್ಕಾರವು ಪ್ರತಿ ವರ್ಷ ಡಿಸೆಂಬರ್ 22 ಅನ್ನು ರಾಷ್ಟ್ರೀಯ ಗಣಿತ ದಿನವನ್ನಾಗಿ ಆಚರಿಸುತ್ತದೆ.* "ಗಣಿತ: ನಾವೀನ್ಯತೆ ಮತ್ತು ಪ್ರಗತಿಗೆ ಸೇತುವೆ" (Mathematics: Bridge to innovation) ಎಂಬುವುದು ರಾಷ್ಟ್ರೀಯ ಗಣಿತ ದಿನದ 2024 ರ ಥೀಮ್ ಆಗಿದೆ.* ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು 26 ಡಿಸೆಂಬರ್ 2011 ರಂದು ಮದ್ರಾಸ್ ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರ 125 ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪರಿಚಯಿಸಿದರು.* ಈ ಸಂದರ್ಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು 2012ಅನ್ನು ರಾಷ್ಟ್ರೀಯ ಗಣಿತ ವರ್ಷವನ್ನಾಗಿ ಆಚರಿಸಲಾಗುವುದು ಎಂದು ಘೋಷಿಸಿದರು.* ದೇಶದಾದ್ಯಂತ ಎಲ್ಲಾ ಶಾಲೆಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ರಾಷ್ಟ್ರೀಯ ಗಣಿತ ದಿನವನ್ನು ಆಚರಿಸಲಾಗುತ್ತದೆ.* ತಮಿಳುನಾಡಿನ ಈರೋಡ್ನಲ್ಲಿ ಡಿಸೆಂಬರ್ 22, 1887 ರಲ್ಲಿ ಜನಿಸಿದ ಶ್ರೀನಿವಾಸ ರಾಮಾನುಜನ್ ರವರು ಗಣಿತ ವಿಷಯದೊಂದಿಗೆ ಇದ್ದ ಒಲವು, ಅಪಾರ ಜ್ಞಾನದಿಂದಾಗಿ ಅವರು ಗಣಿತ ಕ್ಷೇತ್ರಕ್ಕೆ ನೀಡಿದ ಕೊಡುಗೆ ಮತ್ತು ಸಾಧನೆಗಳನ್ನು ಗುರುತಿಸಲು ಪ್ರತಿ ವರ್ಷ ಡಿಸೆಂಬರ್ 22 ರಂದು ' ರಾಷ್ಟ್ರೀಯ ಗಣಿತ ದಿನ'ವನ್ನು ಆಚರಣೆ ಮಾಡಲಾಗುತ್ತದೆ.