Loading..!
KPSC Vaani
Login
My Orders
My Cart
Shorts
Job news
Current Affairs
Buy books
Practice Papers
Quizzes
Question Papers
Institutes
Flash news
Cut Offs
Blogs
Study Materials
Contact Us
About Us
More
Study Materials
Cut Offs
Blogs
Contact Us
Upload file
About Us
Login
Register
×
Warning!
Enter minimum 2 characters.
Back
ಪ್ರಚಲಿತ ಘಟನೆಗಳು
2,350 ಕೋಟಿ ವೆಚ್ಚದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಅನುಮೋದನೆ
17 ಅಕ್ಟೋಬರ್ 2025
* ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಪ್ರದೇಶದಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಸುಮಾರು
2,350 ಕೋಟಿ ರೂಪಾಯಿ ವೆಚ್ಚದಲ್ಲಿ
ನಿರ್ಮಾಣಗೊಳ್ಳುವ ಈ ಸ್ಟೇಡಿಯಂಗೆ ರಾಜ್ಯ ಕ್ರೀಡಾ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆ ಸಂಯುಕ್ತವಾಗಿ ಯೋಜನೆ ರೂಪಿಸಿವೆ.
* ಕರ್ನಾಟಕವನ್ನು ರಾಷ್ಟ್ರ ಮಟ್ಟದಲ್ಲಿ ಮಾತ್ರವಲ್ಲ, ಅಂತರಾಷ್ಟ್ರೀಯ ಕ್ರೀಡಾ ಕೇಂದ್ರವಾಗಿ ಅಭಿವೃದ್ಧಿಪಡಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಯುವ ಪ್ರತಿಭೆಗಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಿ, ವಿಶ್ವ ಮಟ್ಟದ ಪಂದ್ಯಗಳನ್ನು ಆಯೋಜಿಸಲು ಈ ಕ್ರೀಡಾಂಗಣವನ್ನು ವಿನ್ಯಾಸಗೊಳಿಸಲಾಗಿದೆ.
* ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ಸುಮಾರು
75 ಎಕರೆ ಪ್ರದೇಶದಲ್ಲಿ
ಸ್ಟೇಡಿಯಂ ನಿರ್ಮಾಣವಾಗಲಿದೆ.ಕ್ರಿಕೆಟ್ ಸೇರಿದಂತೆ ಫುಟ್ಬಾಲ್, ಅಥ್ಲೆಟಿಕ್ಸ್, ಇತರ ಒಳಾಂಗಣ ಕ್ರೀಡೆಗಳಿಗೆ ಪ್ರತ್ಯೇಕ ವಿಭಾಗಗಳು ಇರಲಿವೆ ಹಾಗೂ ಆಧುನಿಕ ತಂತ್ರಜ್ಞಾನ, ಪ್ರೇಕ್ಷಕರಿಗೆ ಆರಾಮದಾಯಕ ಆಸನ ವ್ಯವಸ್ಥೆ, ವಿಶಾಲ ಪಾರ್ಕಿಂಗ್ ವ್ಯವಸ್ಥೆ ಹಾಗೂ ಕ್ರೀಡಾಪಟುಗಳಿಗೆ ತರಬೇತಿ ಕೇಂದ್ರಗಳ ವ್ಯವಸ್ಥೆಯೂ ಇರಲಿದೆ.
* 80,000 ಪ್ರೇಕ್ಷಕರ ಸಾಮರ್ಥ್ಯವಿರುವಂತೆ ವಿನ್ಯಾಸ ಮಾಡಲಾಗಿದ್ದು, ಅಂತರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತದೆ.
* ರಾಜ್ಯ ಸರ್ಕಾರವು ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿಯೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸೌಲಭ್ಯಗಳನ್ನು ನಿರ್ಮಿಸಲು ಕ್ರಮಗಳನ್ನು ಕೈಗೊಂಡಿದೆ. ಇದರ ಭಾಗವಾಗಿ ಕಿಕ್ಕೋಟ್ ಸ್ಟೇಡಿಯಂ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
Take Quiz
Loading...