* ಸುಜ್ಲಾನ್ ಕಂಪನಿಯಿಂದ 3 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಪವನ ವಿದ್ಯುತ್ ಉತ್ಪಾದನಾ ಘಟಕ ಹಾಗೂ ವಿಂಗ್ಸ್ ವಿಟೆರಾ ಕಂಪನಿಯಿಂದ ಪ್ರತಿದಿನ 800 ಟನ್ ಸಾಮರ್ಥ್ಯದ ಬಹುಬಗೆಯ ಬೇಳೆಕಾಳು ಸಂಸ್ಕರಣಾ ಘಟಕ ಸ್ಥಾಪನೆಯಾಗಲಿದೆ. * ಇನ್ವೆಸ್ಟ್ ಕರ್ನಾಟಕ-2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ವಿಜಯಪುರ ಜಿಲ್ಲೆಯು ದೊಡ್ಡ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.* ವಿಜಯಪುರದಲ್ಲಿ 3 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಪವನ ವಿದ್ಯುತ್ ಉತ್ಪಾದನೆ ಅಭಿವೃದ್ಧಿಪಡಿಸಲು ಮತ್ತು ಅತ್ಯಾಧುನಿಕ ವಿಂಡ್ ಟರ್ಬೈನ್ ಬ್ಲೇಡ್ ತಯಾರಿಕಾ ಘಟಕ ಸ್ಥಾಪಿಸಲು ಸುಜ್ಲಾನ್ ಕಂಪೆನಿಯು ರಾಜ್ಯ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದೆ.* ಈ ಉಪಕ್ರಮವು ಗಾಳಿ ವಿದ್ಯುತ್ ಉತ್ಪಾದನೆಯ ಜಾಗತಿಕ ಕೇಂದ್ರವಾಗಿ ಭಾರತವನ್ನು ಅಭಿವೃದ್ಧಿಪಡಿಸಲು, ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಮತ್ತು ಸುಸ್ಥಿರತೆ ಸಾಧಿಸಲು ನೆರವಾಗಲಿದೆ.* ವಿಜಯಪುರ ಅಥವಾ ಕಲಬುರಗಿಯಲ್ಲಿ ಪ್ರತಿ ದಿನ 800 ಟನ್ ಸಾಮರ್ಥ್ಯದ ಬಹುಬಗೆಯ ಬೇಳೆಕಾಳು ಸಂಸ್ಕರಣಾ ಘಟಕ ಸ್ಥಾಪಿಸಲು ವಿಂಗ್ಸ್- ವಿಟೆರಾ ಕಂಪನಿಯು 250 ಕೋಟಿ ರೂಪಾಯಿ ಬಂಡವಾಳ ತೊಡಗಿಸಲಿದೆ. ಈ ಘಟಕವು ಕಾರ್ಯಾರಂಭ ಮಾಡಿದ 2ನೇ ವರ್ಷದಿಂದ 800 ಕೋಟಿ ರೂಪಾಯಿ ವಾರ್ಷಿಕ ವಹಿವಾಟು ನಡೆಸಲಿದೆ. ದಕ್ಷಿಣ ಭಾರತದಲ್ಲಿನ ಬೇಳೆಕಾಳುಗಳ ಅತಿದೊಡ್ಡ ಸಂಸ್ಕರಣಾ ಘಟಕ ಇದಾಗಿರಲಿದೆ.* ಮೈಸೂರು, ಮಂಗಳೂರು, ಕಲ್ಬುರ್ಗಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಸೇರಿದಂತೆ ಹಲವು ನಗರಗಳಲ್ಲಿ ನವೋದ್ಯಮಗಳಿಗೆ ಪೂರಕ ವಾತಾವರಣ ಸೃಷ್ಟಿಸಲಾಗುತ್ತಿದೆ. ಕೃತಕ ಬುದ್ಧಿಮತ್ತೆ, ಡಾಟಾ ಸೈನ್ಸ್ ತಂತ್ರಜ್ಞಾನಕ್ಕೆ ಉತ್ತೇಜನ ನೀಡಲಾಗುತ್ತಿದ್ದು, ಪರಿಪೋಷಕ (ಇನ್ ಕ್ಯುಬೇಷನ್) ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.