* ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ ಸಂವಿಧಾನದ 370 ನೇ ವಿಧಿಯನ್ನು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ರದ್ದುಗೊಳಿಸುವ ಕುರಿತು ಸುಪ್ರೀಂ ಕೋರ್ಟ್ 11 ಡಿಸೆಂಬರ್ 2023 ರಂದು ಮಹತ್ವದ ತೀರ್ಪು ನೀಡಿದೆ.* ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಸಂವಿಧಾನ ಪೀಠವು 370 ನೇ ವಿಧಿಯನ್ನು ತೆಗೆದುಹಾಕುವ ಸರ್ಕಾರದ ನಿರ್ಧಾರವನ್ನು ಸರ್ವಾನುಮತದಿಂದ ಎತ್ತಿಹಿಡಿಯಿತು. * ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸು ಆದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದ್ದು, ಈ ಸಂದರ್ಭದಲ್ಲಿ 2024ರ ಸೆಪ್ಟೆಂಬರ್ 30ರೊಳಗೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.* ಕೇಂದ್ರ ಸರ್ಕಾರದ ನಿರ್ಧಾರದ ನಂತರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆಯನ್ನು ಸಂಸತ್ತು ಅಂಗೀಕರಿಸಿತ್ತು. ಇದು ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.* ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ 370 ನೇ ವಿಧಿ ರದ್ದುಗೊಳಿಸಿದ ಪರಿಣಾಮಗಳು :- ಭಾರತದೊಳಗೆ ನುಸುಳುವ ಭಯೋತ್ಪಾದಕರ ಸಂಖ್ಯೆ ಕಡಿಮೆ ಆಗಿದೆ. - ದೇಶ ವಿರೋಧಿ ಚಟುವಟಿಕೆಗಳು, ಭಯೋತ್ಪಾದನೆ ಚಟುವಟಿಕೆಗಳು ಸಂಪೂರ್ಣ ನಿಯಂತ್ರಣಗೊಳ್ಳುವುದರ ಮೂಲಕ ಕಾಶ್ಮೀರದ ಜನತೆ ನೆಮ್ಮದಿಯಿಂದ ಇರುವಂತಾಗಿದೆ.