* ಅರುವತ್ತು ಹಾಗೂ ಅದಕ್ಕಿಂತ ಹೆಚ್ಚು ವಯಸ್ಸಿನ ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಗುರಿ ಹೊಂದಿರುವ ಆರೋಗ್ಯ ಸೌಲಭ್ಯ ‘ಸಂಜೀವಿನಿ ಯೋಜನೆ’ಯನ್ನು ಆಮ್ ಆದ್ಮಿ ಪಕ್ಷ (ಎಎಪಿ)ದ ವರಿಷ್ಠ ಅರವಿಂದ ಕೇಜ್ರಿವಾಲ್ ಅವರು ಡಿಸೆಂಬರ್ 18 (ಬುಧವಾರ) ಘೋಷಿಸಿದ್ದಾರೆ.* 2025 ರ ವರ್ಷದ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆಯನ್ನು ಘೋಷಿಸಿದೆ.* ಈ ಯೋಜನೆಯು ಎಲ್ಲಾ ಹಿರಿಯ ನಾಗರಿಕರಿಗೆ ಆರೋಗ್ಯ ಸೇವೆ ಲಭ್ಯವಾಗುವುದನ್ನು ಖಾತರಿಪಡಿಸಲು ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಒದಗಿಸಲಿದೆ.* “ಚಿಕಿತ್ಸೆಯ ವೆಚ್ಚದ ಮೇಲೆ ಯಾವುದೇ ಹೆಚ್ಚಿನ ಮಿತಿ ಇರುವುದಿಲ್ಲ. ಇದಕ್ಕೆ ನೋಂದಣಿ ಒಂದು ಅಥವಾ ಎರಡು ದಿನದಲ್ಲಿ ಪ್ರಾರಂಭವಾಗುತ್ತದೆ. ಆಪ್ ಕಾರ್ಯಕರ್ತರು ನೋಂದಣಿಗಾಗಿ ನಿಮ್ಮ ಮನೆಗೆ ಬರುತ್ತಾರೆ. ಅವರು ನಿಮಗೆ ಕಾರ್ಡ್ ನೀಡುತ್ತಾರೆ, ಅದನ್ನು ಸುರಕ್ಷಿತವಾಗಿ ಇರಿಸಿ. ನಾವು ಅಧಿಕಾರಕ್ಕೆ ಬಂದ ನಂತರ ಚುನಾವಣೆಯ ನಂತರ ಈ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಕೇಜ್ರಿವಾಲ್ ಅವರು ತಿಳಿಸಿದ್ದಾರೆ.