* ನವೆಂಬರ್ 1 ರಂದು ನಡೆಯುವ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಗುರಿ ಹೊಂದಿದೆ.* 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಿವಿಧ ಸಾಧಕರ ಹೆಸರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಗಂಡಗಿ ಅವರು ವಿಕಾಸಸೌಧದಲ್ಲಿ ಪ್ರಶಸ್ತಿ ವಿಜೇತರು ಮತ್ತು ಪ್ರಶಸ್ತಿ ವಿಜೇತ ಸಂಘ ಸಂಸ್ಥೆಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ.* ಚಂದ್ರಯಾನ-3ರ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಸ್ರೋ ಸಂಸ್ಥೆಯ ಅಧ್ಯಕ್ಷ ಎಸ್‌. ಸೋಮನಾಥನ್, ಶತಾಯುಷಿಗಳಾದ ಹುಸೇನಾಬಿ ಬುಡೆನ್‌ಸಾಬ್‌ ಸಿದ್ದಿ, ಕೆ. ರೂಪ್ಲಾನಾಯಕ್‌, ಏಷ್ಯನ್‌ ಗೇಮ್ಸ್ ಪದಕ ವಿಜೇತೆ ಅದಿತಿ ಅಶೋಕ್‌, ಪತ್ರಿಕಾ ವಿತರಕ ಜವರಪ್ಪ ಸೇರಿದಂತೆ 19 ವಿಭಾಗಗಳಲ್ಲಿ 68 ಸಾಧಕರಿಗೆ 2023 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ. * ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನವೆಂಬರ್ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಪುರಸ್ಕೃತರಿಗೆ ತಲಾ 5 ಲಕ್ಷ ರು. ನಗದು ಹಾಗೂ 25 ಗ್ರಾಂ ಚಿನ್ನದ ಪದಕ ನೀಡಲಾಗುತ್ತದೆ.* ಮೈಸೂರು ರಾಜ್ಯ ಕರ್ನಾಟಕ ನವೆಂಬರ್ 1 ಕ್ಕೆ -50 ವರ್ಷ ಪೂರ್ಣಗೊಳ್ಳುವದರ ಅಂಗವಾಗಿ ಬೆಂಗಳೂರಿನ ಮಿಥಿಕ್ ಸೊಸೈಟಿ, ಶಿವಮೊಗ್ಗದ ಕರ್ನಾಟಕ ಸಂಘ, ಗದಗದ ವಿದ್ಯಾದಾನ ಸಮಿತಿ ಸೇರಿ ಒಟ್ಟು 10 ಸಂಘ-ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ.