* ಡಿಸೆಂಬರ್ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Akhila Bharata Kannada Sahitya Sammelana) ಅಧ್ಯಕ್ಷರಾಗಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ (Banu Mushtaq) ಅವರು ಆಯ್ಕೆಯಾಗಿದ್ದಾರೆ.* ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ನೇತೃತ್ವದಲ್ಲಿ ಬಳ್ಳಾರಿಯಲ್ಲಿ (Ballari) ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳು ಸರ್ವಾನುಮತದಿಂದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದಾರೆ.* ಜೂ. 29ರಂದು ಬಳ್ಳಾರಿಯ ಖಾಸಗಿ ಹೋಟೆಲ್ನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಅವರು ತಿಳಿಸಿದರು.* ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್ಗೆ (Heart Lamp) ಪ್ರಶಸ್ತಿ ಸಿಕ್ಕಿತ್ತು. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ. ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್ (ಅಂದಾಜು 57.28 ಲಕ್ಷ ರೂ.) ಒಳಗೊಂಡಿತ್ತು. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು.