* ರಾಜ್ಯ ಸರ್ಕಾರ 2025-26ನೇ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ನೈತಿಕ ಮೌಲ್ಯಗಳ ಶಿಕ್ಷಣವನ್ನು ಕಡ್ಡಾಯಗೊಳಿಸಲು ನಿರ್ಧರಿಸಿದೆ. 8ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಲೈಂಗಿಕ ಶಿಕ್ಷಣವೂ ಒಳಗೊಂಡಿರಲಿದೆ. ವಾರಕ್ಕೆ ಎರಡು ಅವಧಿಯಲ್ಲಿ ಈ ಪಾಠಗಳನ್ನು ಬೋಧಿಸಲಿದ್ದು, ಪರೀಕ್ಷೆಯನ್ನೂ ನಡೆಸಲಾಗುವುದು. ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.* ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಲು ಶ್ರವಣಕುಮಾರ, ಸತ್ಯ ಹರಿಶ್ಚಂದ್ರ, ಶ್ರೀರಾಮ, ಅರ್ಜುನ, ಕರ್ಣ, ವಿಶ್ವೇಶ್ವರಯ್ಯ ಅವರ ಜೀವನ ಕಥೆಗಳನ್ನು ಪಾಠಗಳಲ್ಲಿ ಒಳಪಡಿಸಲಾಗುತ್ತದೆ.* ಹದಿಹರೆಯದ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಪರಿಹಾರೋಪಾಯಗಳ ಕುರಿತು ಇತ್ತೀಚೆಗೆ ಸುದೀರ್ಘ ಚರ್ಚೆ ನಡೆದಿತ್ತು. ಆಡಳಿತ ಹಾಗೂ ಪ್ರತಿಪಕ್ಷಗಳ ಅನೇಕ ಸದಸ್ಯರು ಪಾಲ್ಗೊಂಡು ತಮ್ಮ ಅಭಿಪ್ರಾಯ, ಸಲಹೆ, ಸೂಚನೆಗಳನ್ನು ಸರ್ಕಾರಕ್ಕೆ ನೀಡಿದ್ದರು. * 8ರಿಂದ 12ನೇ ತರಗತಿಯ ಮಕ್ಕಳಿಗೆ ವಾರದಲ್ಲಿ 2 ದಿನ ಲೈಂಗಿಕ ಶಿಕ್ಷಣ ಕಡ್ಡಾಯವಾಗಿದ್ದು, ಇದರಲ್ಲಿ ಹಾರ್ಮೋನ್ ಬದಲಾವಣೆಗಳು ಮತ್ತು ದೈಹಿಕ, ಮಾನಸಿಕ, ಭಾವನಾತ್ಮಕ ಬೆಳವಣಿಗೆಗಳ ಬಗ್ಗೆ ತಿಳಿವಳಿಕೆ ನೀಡಲಾಗುವುದು.* ಶಾಲಾ ಶಿಕ್ಷಕರಿಗೆ ಬಡ್ತಿ ಅವಕಾಶಗಳ ಕೊರತೆಯ ಕುರಿತು ಪರಿಷತ್ತಿನಲ್ಲಿ ಚರ್ಚೆ ನಡೆಯಿತು. ವಿವಿಧ ಪಕ್ಷಗಳ ಶಾಸಕರು ಸರ್ಕಾರವನ್ನು ಸಮಸ್ಯೆ ಪರಿಹರಿಸಲು ಒತ್ತಾಯಿಸಿದರು. ಬಿಜೆಪಿ ಶಾಸಕ ಸಶಿಲ್ ನಮೋಶಿ ಶಿಕ್ಷಕರ ವೃತ್ತಿ ಬೆಳವಣಿಗೆ ಬಾಧಕವಾಗಿರುವುದನ್ನು ಉಲ್ಲೇಖಿಸಿದರು.* ವೈದ್ಯರ ಸಲಹೆ, ಪೋಕ್ಸೊ ಕಾಯ್ದೆ ಬಗ್ಗೆ ಕಾರ್ಯಾಗಾರ, ವಿದ್ಯಾರ್ಥಿಗಳ ಸಲಹಾ ಪೆಟ್ಟಿಗೆ, ಆಪ್ತ ಸಮಾಲೋಚನಾ ಸಮಿತಿ ಸೇರಿದಂತೆ ಹಲವಾರು ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.