Job Description: * ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ದಿನದ ನೆನಪಿಗಾಗಿ ಆ.23 ರನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. * ಚಂದ್ರನ ದಕ್ಷಿಣ ಭಾಗದಲ್ಲಿ ಆಗಸ್ಟ್ ಇಪ್ಪತ್ತಮೂರರಂದು ಯಶಸ್ವಿಯಾಗಿ ವಿಕ್ರಮ್‌ ಲ್ಯಾಂಡರ್‌, ಪ್ರಜ್ಞಾನ್‌ ರೋವರ್‌ ಇಳಿಯುವ ಮೂಲಕ ಚಂದ್ರಯಾನ-1 ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ' ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಿಸಿದೆ, *ಆ. 26ರಂದು ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕತ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರಧಾನ ಕಚೇರಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಆಗಸ್ಟ್ 23ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವೆಂದು ಘೋಷಿಸಿದ್ದರು. * ಈ ಹಿನ್ನೆಲೆ ಪ್ರತೀ ವರ್ಷ ಆಗಸ್ಟ್‌ 23 ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಆಚರಿಸಲು ಕೇಂದ್ರ ಸರ್ಕಾರ ಇಂದು ಅಧಿಕೃತವಾಗಿ ಘೋಷಿಸಿದೆ. * ಭಾರತವು ಚಂದ್ರನ ಮೇಲೆ ಬಾಹ್ಯಾಕಾಶ ನೌಕೆಯನ್ನು ಇಳಿಸಿದ ವಿಶ್ವದ ನಾಲ್ಕನೇ ದೇಶ ಮತ್ತು ಚಂದ್ರನ ದಕ್ಷಿಣ ದ್ರುವದ ಮೇಲೆ ಇಳಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.