* ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.31 ರಂದು ವಿಮಾನಯಾನ ಆರಂಭವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ತಿಳಿಸಿದ್ದಾರೆ.* ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದ ಸುಮಾರು ಅರ್ಧ ವರ್ಷದ ಬಳಿಕ ವಿಮಾನ ಹಾರಾಟ ಆರಂಭವಾಗುತ್ತಿದ್ದು.  ಗುರುವಾರ ಬೆಳಿಗ್ಗೆ 9.50 ಬೆಂಗಳೂರಿನ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.05ಕ್ಕೆ ಶಿವಮೊಗ್ಗ ತಲುಪಲಿದೆ. * 'ಶಿವಮೊಗ್ಗದಿಂದ 15 ಕಿ.ಮೀ. ದೂರದಲ್ಲಿರುವ ಸೋಗಾನೆ ಎಂಬಲ್ಲಿ 779 ಎಕರೆ ಜಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದ್ದು,  450 ಕೋಟಿ ವಿನಿಯೋಗಿಸಲಾಗಿದೆ* ಇದೀಗ ಶಿವಮೊಗ್ಗ ವಿಮಾನ ನಿಲ್ದಾಣದಿಂದ ದೆಹಲಿ, ಚೆನ್ನೈ ಮತ್ತು ಮುಂಬೈಗೂ ಸೇವೆ ಆರಂಭವಾಗಲಿರುವುದು ಮಲೆನಾಡಿಗರಿಗೆ ಸಂತಸ ಮೂಡಿಸಿದೆ.