* ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊಟ್ಟ ಮೊದಲ ಬಾಹ್ಯಾಕಾಶ ಆಧಾರಿತ ಮಿಷನ್ ಆದಿತ್ಯ-ಎಲ್ 1 ಬಾಹ್ಯಾಕಾಶ ನೌಕೆಯು ಅಂತಿಮ ಹಂತವನ್ನು ಸಮೀಪಿಸುತ್ತಿದೆ.* 'ಆದಿತ್ಯ-ಎಲ್ 1' ಬಿಂದುವನ್ನು ಪ್ರವೇಶಿಸುವ ಮೂಲಕ ಜನವರಿ 7, 2024ರ ವೇಳೆಗೆ ಪಯಣ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಇಸ್ರೋ ಅಧ್ಯಕ್ಷರಾದ ಎಸ್.ಸೋಮನಾಥ್ ಅವರು ಮಾಹಿತಿ ನೀಡಿದರು.* ಈ ಬಾಹ್ಯಾಕಾಶ ವೀಕ್ಷಣಾಲಯವನ್ನು ಭೂಮಿಯಿಂದ 125 ದಿನಗಳಲ್ಲಿ ಸುಮಾರು 1.5 ಮಿಲಿಯನ್ ಕಿ.ಮೀ ಪ್ರಯಾಣಿಸಿದ ನಂತರ ಸೂರ್ಯನಿಗೆ ಹತ್ತಿರವಿರುವ ಲಗ್ರಾಂಜಿಯನ್ ಪಾಯಿಂಟ್ L1 ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾಗುವುದು.