* ಭಾರತದಲ್ಲಿ ಸ್ವಾತಂತ್ರ್ಯ ದಿನವನ್ನು ಪ್ರತಿ ವರ್ಷ ಆಗಸ್ಟ್ 15 ರಂದು ಆಚರಿಸಲಾಗುತ್ತದೆ. ಈ ದಿನವು ಬ್ರಿಟಿಷರ ಆಳ್ವಿಕೆಯಿಂದ ಭಾರತದ ಸ್ವಾತಂತ್ರ್ಯವನ್ನು ಸೂಚಿಸುತ್ತದೆ. ಸ್ವಾತಂತ್ರ್ಯ ದಿನಾಚರಣೆ ಪ್ರತಿಯೊಬ್ಬ ಭಾರತೀಯರಿಗೆ ಹೆಮ್ಮೆಯ ದಿನವಾಗಿದೆ. ಇದು ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಹಾಗೂ ಬ್ಯಾಂಕ್ಗಳು, ಶಾಲೆಗಳು ಮತ್ತು ಕಾಲೇಜುಗಳು ಮತ್ತು ದೇಶದ ಎಲ್ಲಾ ಇತರ ಸಂಸ್ಥೆಗಳಿಗೆ ರಾಷ್ಟ್ರೀಯ ರಜಾದಿನವಾಗಿದೆ .* 2025ರ ಸ್ವಾತಂತ್ರ್ಯ ದಿನಾಚರಣೆಯ ವಿಷಯ(ಥೀಮ್) "ನವ ಭಾರತ" ಎಂಬುದು ಥೀಮ್ ಆಗಿದೆ.* 1857ರಿಂದ ಅಧಿಕೃತ ಆರಂಭವಾಗಿದ್ದ ಸ್ವಾತಂತ್ರ್ಯ ಹೋರಾಟದ ಕಿಚ್ಚು 90 ವರ್ಷಗಳ ನಿರಂತರ ಹೋರಾಟದ ಫಲವೇ 1947ರ ಆಗಸ್ಟ್ 15ರಂದು ಭಾರತಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕಿತು. ಆ ಮೂಲಕ 200 ವರ್ಷಗಳ ಬ್ರಿಟಿಷರ ಆಡಳಿತ ಅಂತ್ಯವಾಯಿತು. ಸ್ವಾತಂತ್ರ್ಯಕ್ಕಾಗಿ 1857 ರಿಂದ 1947 ರವರೆಗೂ ನಿರಂತರ ಹೋರಾಟ ಮಾಡಲಾಗಿದೆ. ಬ್ರಿಟಿಷ್ ಆಡಳಿತದ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ಅವಿರತ ಸಾಧನೆಯನ್ನು ಇಂದು ನಾವು ಸ್ಮರಿಸಲಾಗುತ್ತದೆ.* ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್ ಮತ್ತು ಇತರೆ ಅನೇಕರ ನೇತೃತ್ವದಲ್ಲಿ ನಡೆದ ಹೋರಾಟಗಳು ಅಹಿಂಸಾತ್ಮಕ ಮತ್ತು ಕ್ರಾಂತಿಕಾರಿಯಾಗಿದ್ದವು. 1947ರ ಆಗಸ್ಟ್ 15ರಂದು, ಜವಾಹರಲಾಲ್ ನೆಹರೂ ಮೊದಲ ಪ್ರಧಾನಿಯಾಗುವುದರೊಂದಿಗೆ ಭಾರತವು ಅಂತಿಮವಾಗಿ ಸ್ವಾತಂತ್ರ್ಯವನ್ನು ಗಳಿಸಿತು. ಅವರ ಪ್ರಸಿದ್ಧ ಭಾಷಣವಾದ ‘ಟ್ರಿಸ್ಟ್ ವಿತ್ ಡೆಸ್ಟಿನಿ’ ಭಾರತಕ್ಕೆ ಹೊಸ ಯುಗದ ಆರಂಭವಾಗಿತ್ತು.* ದೆಹಲಿಯ ಕೆಂಪು ಕೋಟೆಯು ಸ್ವಾತಂತ್ರ್ಯ ದಿನದ ಪ್ರಮುಖ ಸಂಕೇತವಾಗಿದೆ. ಇದು 15 ಆಗಸ್ಟ್ 1947 ರಂದು ಭಾರತದ ಮೊದಲ ಪ್ರಧಾನ ಮಂತ್ರಿ ಭಾರತೀಯ ಧ್ವಜವನ್ನು ಅನಾವರಣಗೊಳಿಸಿದ ಸ್ಥಳವಾಗಿದೆ .* ಭಾರತದ ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ. * ರಾಷ್ಟ್ರ ಧ್ವಜದ ಬಣ್ಣಗಳ ವಿಶೇಷತೆ- ಕೇಸರಿ:- ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.- ಬಿಳಿಬಣ್ಣ :- ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.- ಹಸಿರು ಬಣ್ಣ :- ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತಾ, ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ.