* ಚಂದ್ರಯಾನ-3 (Chandrayaan-3) ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ದಿನವಾದ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.* ಭಾರತ ಸರ್ಕಾರವು ಈ ಐತಿಹಾಸಿಕ ಕ್ಷಣವನ್ನು ಸ್ಮರಣಾರ್ಥವಾಗಿ ಪ್ರತಿವರ್ಷ ಆಗಸ್ಟ್ 23 ನೇ ದಿನವನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಘೋಷಿಸಿದೆ ಎಂದು ಅಕ್ಟೋಬರ್ 13 ರಂದು ಬಾಹ್ಯಾಕಾಶ ಇಲಾಖೆಯು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.* ಭಾರತವು ಚಂದ್ರನ ಮೇಲೆ ಬಾಹ್ಯಾಕಾಶ ನೌಕೆಯನ್ನು ಇಳಿಸಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿದ್ದು, ಚಂದ್ರನ ಮೇಲ್ಮೈಯ ದಕ್ಷಿಣ ಧ್ರುವದ ಬಳಿ ಇಳಿದ ಮೊದಲ ರಾಷ್ಟ್ರವಾಗಿದೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡಲು ಪ್ರಗ್ಯಾನ್ ರೋವರ್ ಅನ್ನು ಚಂದ್ರನ ಮೇಲೆ ನಿಯೋಜಿಸಿತ್ತು.* ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ಇಸ್ರೋ) ಆಗಸ್ಟ್ 26 ರಂದು ಪ್ರಧಾನ ಕಚೇರಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸುವುದಾಗಿ ಘೋಷಿಸಿದ್ದರು.