Job Description: * ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕನ್ನಡಿಗ ಎಸ್. ಅಬ್ದುಲ್‌ ನಜೀರ್ ರವರು ಆಂಧ್ರ‍ಪ್ರದೇಶದ ನೂತನ ರಾಜ್ಯಪಾಲರಾಗಿ ಫೆ. 24 ರಂದು ಪ್ರಮಾಣವಚನ ಸ್ವೀಕಾರ ಮಾಡಿದರು.* ಸಮಾರಂಭದಲ್ಲಿ ಹೈದರಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಪ್ರಶಾಂತ್ ಕುಮಾರ್ ಮಿಶ್ರಾ ಅವರು ನೂತನ ರಾಜ್ಯಪಾಲರಾದ ನಜೀರ್ ರವರಿಗೆ ಪ್ರಮಾಣ ವಚನ ಬೋಧಿಸಿದರು.* ನ್ಯಾಯಮೂರ್ತಿ ನಜೀರ್ ಅವರು ನವೆಂಬರ್ 2019 ರಲ್ಲಿ ವಿವಾದಿತ ರಾಮ ಜನ್ಮಭೂಮಿ ಪ್ರಕರಣದ ಮೊಕದ್ದಮೆಯನ್ನು ಇತ್ಯರ್ಥಪಡಿಸಿದ ಐದು ನ್ಯಾಯಾಧೀಶರ ಪೀಠದಲ್ಲಿ ಇವರು ಒಬ್ಬರಾಗಿದ್ದರು. * ನ್ಯಾಯಮೂರ್ತಿ ನಜೀರ್ 1983 ರಲ್ಲಿ ಕರ್ನಾಟಕ ಹೈಕೋರ್ಟ್‌ನಲ್ಲಿ ಮೊದಲ ಬಾರಿಗೆ ವಕೀಲರಾಗಿ ಸೇವೆ ಸಲ್ಲಿಸಿದರು. ನಂತರ 2003 ರಲ್ಲಿ ಹೈಕೋರ್ಟ್‌ನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು. ನ್ಯಾಯಮೂರ್ತಿ ನಜೀರ್ ಅವರು ಫೆಬ್ರವರಿ 17, 2017 ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆದರು.* ಈ ಹಿಂದೆ ಆಂಧ್ರಪ್ರದೇಶ ರಾಜ್ಯಪಾಲರಾಗಿದ್ದ ಬಿಸ್ವಾ ಭೂಷನ್‌ ಹರಿಚಂದ್ರನ್‌ ಅವರನ್ನು ಚತ್ತೀಸ್‌ಗಡಕ್ಕೆ ವರ್ಗಾವಣೆ ಮಾಡಲಾಗಿದೆ.