* ಆಂಧ್ರಪ್ರದೇಶ ಸರ್ಕಾರದ ಬಹು ನಿರೀಕ್ಷಿತ ಕ್ರಮದಲ್ಲಿ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿ ಜೂನ್ 14 ರಂದು ಘೋಷಿಸಲಾಯಿತ್ತು.* ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಹಾಗೂ ನಟ-ರಾಜಕಾರಣಿಯಾಗಿ ಮಾರ್ಪಟ್ಟಿರುವ ಪವನ್ ಕಲ್ಯಾಣ್ ಅವರಿಗೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಪರಿಸರ, ಅರಣ್ಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯನ್ನು  ಹಂಚಿಕೆ ಮಾಡಲಾಗಿದೆ. * 25 ಸದಸ್ಯರ ಸಚಿವ ಸಂಪುಟದಲ್ಲಿ ಪವನ್ ಕಲ್ಯಾಣ್ ಅವರ ನೇತೃತ್ವದ ಜನಸೇನಾದಿಂದ ಮೂವರು ಹಾಗೂ ಬಿಜೆಪಿಯಿಂದ ಒಬ್ಬರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.* ರಾಜ್ಯದಲ್ಲಿ ನಡೆದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಎನ್‌ಡಿಎ ಕೂಟವು ಭರ್ಜರಿ ಗೆಲುವು ಸಾಧಿಸಿತ್ತು. ವಿಧಾನಸಭಾ ಚುನಾವಣೆಗಳಲ್ಲಿ 175 ಸ್ಥಾನಗಳ ಪೈಕಿ 164 ಸ್ಥಾನ ಮತ್ತು 25 ಲೋಕಸಭಾ ಸ್ಥಾನಗಳ ಪೈಕಿ 21 ಸ್ಥಾನ ಗೆದ್ದಿತ್ತು.* ಪವನ್ ಕಲ್ಯಾಣ್ ಅವರು 2013 ರಿಂದ ಫೋರ್ಬ್ಸ್ ಇಂಡಿಯಾದ ಸೆಲೆಬ್ರಿಟಿ 100 ಪಟ್ಟಿಯಲ್ಲಿ ಹಲವಾರು ಬಾರಿ ಕಾಣಿಸಿಕೊಂಡಿದ್ದಾರೆ. ಕಲ್ಯಾಣ್ ಫಿಲ್ಮ್‌ಫೇರ್ ಪ್ರಶಸ್ತಿ ದಕ್ಷಿಣ ಮತ್ತು ಇತರ ಪುರಸ್ಕಾರಗಳ ನಡುವೆ SIIMA ಪ್ರಶಸ್ತಿಯನ್ನು ಪಡೆದಿದ್ದಾರೆ. * ಪವನ್ ಕಲ್ಯಾಣ್ ಅವರು ಪ್ರಸ್ತುತ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಪರಿಸರ, ಅರಣ್ಯ, ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನಗಳ ಸಚಿವರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.