* ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಮತ್ತು ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಈ ತಿಂಗಳು ತಿಂಗಳಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದು, ನವದೆಹಲಿಯಲ್ಲಿ ತಮ್ಮ ಭಾರತೀಯ ಸಹವರ್ತಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ 2+2 ಸಚಿವರ ಮಾತುಕತೆಗಾಗಿ ಭಾರತಕ್ಕೆ ಪ್ರಯಾಣಿಸಲಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.* ನವೆಂಬರ್‌ನಲ್ಲಿ ನಡೆಯಲಿರುವ 2+2 ಸಚಿವರ ಸಂವಾದದಲ್ಲಿ ಭಾಗವಹಿಸಲು ಐದು ರಾಷ್ಟ್ರಗಳ ಭೇಟಿಯನ್ನು ಪ್ರಾರಂಭಿಸಲಿದ್ದಾರೆ. ನವೆಂಬರ್ 2ರಿಂದ 10 ರವರೆಗೆ ಇಸ್ರೇಲ್ ಮತ್ತು ಜೋರ್ಡಾನ್ ಪ್ರವಾಸ ಕೈಗೊಳ್ಳಲಿದ್ದಾರೆ. ಆ ಬಳಿಕ ಜಪಾನ್, ದಕ್ಷಿಣ ಕೊರಿಯಾ, ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ' ಎಂದರು. ಈ ಕುರಿತು ವಿದೇಶಾಂಗ ಸಚಿವಾಲಯದ ವಕ್ತಾರ ಮ್ಯಾಥ್ಯ ಮಿಲ್ಲರ್ ಅವರು ಮಾಹಿತಿಯನ್ನು ನೀಡಿದ್ದಾರೆ.* ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇತರ ಭಾರತೀಯ ಅಧಿಕಾರಿಗಳನ್ನು ಭೇಟಿಯಾಗಲಿದ್ದು, ದ್ವಿಪಕ್ಷೀಯ ಮತ್ತು ಜಾಗತಿಕ ಕಾಳಜಿಗಳು ಮತ್ತು ಇಂಡೋ-ಪೆಸಿಫಿಕ್‌ನಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದೆ ಎಂದು ಮಿಲ್ಲರ್ ಅವರು ತಿಳಿಸಿದ್ದಾರೆ.