* ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಗೆ 2026ರಿಂದ 2028ರವರೆಗೆ ಎರಡು ವರ್ಷಗಳ ಅವಧಿಗೆ ಭಾರತವನ್ನು ಆಯ್ಕೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಘೋಷಿಸಿದರು.* ಈ ಅವಧಿಯಲ್ಲಿ ಭಾರತ ಅಭಿವೃದ್ಧಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಉಲೇಖಿಸಲು ಮತ್ತು ಮಂಡಳಿಯನ್ನು ಇನ್ನಷ್ಟು ಬಲಪಡಿಸಲು ಸಮರ್ಪಿತವಾಗಿ ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.* ಆಯ್ಕೆಯಲ್ಲಿ ಬೆಂಬಲ ನೀಡಿದ ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳಿಗೆ ಭಾರತ ತನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಿದೆ.* ಜೈಶಂಕರ್ ಅವರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ “ಭಾರತಕ್ಕೆ ನೀಡಿದ ಭಾರೀ ಬೆಂಬಲಕ್ಕೆ ಎಲ್ಲಾ ಸದಸ್ಯ ರಾಷ್ಟ್ರಗಳಿಗೆ ಧನ್ಯವಾದಗಳು.* ಅಭಿವೃದ್ಧಿಯ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ನಾವು ಬದ್ಧರಾಗಿದ್ದೇವೆ. ಈ ಮಂಡಳಿಯನ್ನು ಮತ್ತಷ್ಟು ಶಕ್ತಿಶಾಲಿಯಾಗಿ ರೂಪಿಸುವ ಕಾರ್ಯ ಮುಂದುವರೆಯುತ್ತದೆ” ಎಂದು ಬರೆದಿದ್ದಾರೆ.* ಆರ್ಥಿಕ, ಸಾಮಾಜಿಕ ಮತ್ತು ಪರಿಸರದ ಸುಸ್ಥಿರ ಅಭಿವೃದ್ಧಿಯ ಕ್ಷೇತ್ರಗಳಲ್ಲಿ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ ಪ್ರಮುಖ ಪಾತ್ರವಹಿಸುತ್ತದೆ.* ಅಂತಾರಾಷ್ಟ್ರೀಯ ಚರ್ಚೆಗಳು, ನವೀನ ಚಿಂತನೆ ಮತ್ತು ಉದ್ದೇಶಿತ ಗುರಿಗಳನ್ನು ಸಾಧಿಸಲು ಇದು ಪ್ರಮುಖ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ.* 1945ರಲ್ಲಿ ಸ್ಥಾಪಿತವಾದ ವಿಶ್ವಸಂಸ್ಥೆಯ ಚಾರ್ಟರ್ನ ಆರು ಪ್ರಮುಖ ಅಂಗಗಳಲ್ಲಿ ಒಂದಾಗಿ ಈ ಮಂಡಳಿ ಅಸ್ತಿತ್ವಕ್ಕೆ ಬಂತು.