* ಪ್ರಧಾನಮಂತ್ರಿ ಉಚ್ಚತರ್ ಶಿಕ್ಷಾ ಅಭಿಯಾನ (ಪಿಎಂ-ಉಷಾ) ಯೋಜನೆ 279.77 ಕೋಟಿ ರೂಪಾಯಿಗಳ ವೆಚ್ಚದಲ್ಲಿ ರಾಜ್ಯದ ಆರು ವಿಶ್ವವಿದ್ಯಾಲಯಗಳಲ್ಲಿ ಜಾರಿಗೆ ಬಂದಿದೆ. ಕಾರ್ಯಕ್ರಮಗಳ ಅನುಷ್ಠಾನ ಪ್ರಾರಂಭವಾಗಿದೆ.* ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ಮತ್ತು ಪ್ರವೇಶವನ್ನು ಹೆಚ್ಚಿಸಲು ಈ ಯೋಜನೆ ಜಾರಿಗೊಳಿಸಲಾಗಿದೆ. ಇದು ಹಳೆಯ ರಾಷ್ಟ್ರೀಯ ಉಚ್ಚತರ್ ಶಿಕ್ಷಣ ಅಭಿಯಾನ - ರೂಸಾ ಯೋಜನೆಯ ಮುಂದುವರಿದ ಹಂತವಾಗಿದೆ.* ರಾಜ್ಯ ಸರ್ಕಾರವು ಕೇಂದ್ರ ಉನ್ನತ ಶಿಕ್ಷಣ ಇಲಾಖೆಯೊಂದಿಗೆ ಒಂದುೂವರೆ ವರ್ಷ ಹಿಂದೆ ಒಪ್ಪಂದ ಮಾಡಿಕೊಂಡಿದ್ದು, ಆಧುನಿಕ ಶಿಕ್ಷಣ ಹಾಗೂ ಸಂಶೋಧನೆಗಾಗಿ ಪ್ರಸ್ತಾವನೆ ಸಲ್ಲಿಸಿ ಆರು ವಿಶ್ವವಿದ್ಯಾಲಯಗಳನ್ನು ಆಯ್ಕೆ ಮಾಡಲಾಗಿದೆ.* ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮವಾಗಿ 60:40 ಅನುಪಾತದಲ್ಲಿ 167.86 ಕೋಟಿ ರೂ. ಮತ್ತು 111.91 ಕೋಟಿ ರೂ. ಹಣ ಬಿಡುಗಡೆ ಮಾಡಿವೆ. ಮೊತ್ತವನ್ನು ರಾಜ್ಯದ ಮದರ್ ಸ್ಯಾಂಕ್ಷನ್ ಖಾತೆಗೆ ವರ್ಗಿಸಲಾಗಿದೆ.* ವಿಶ್ವವಿದ್ಯಾಲಯಗಳು ಸಲ್ಲಿಸಿದ ಯೋಜನೆ ವರದಿಗೆ ಅನುಮೋದನೆ ಆಧಾರದ ಮೇಲೆ ಕಾಮಗಾರಿ ಪ್ರಾರಂಭವಾಗಿದೆ. ಯೋಜನೆಯನ್ನು 2026ರ ಜೂನ್ ವೇಳೆಗೆ ಪೂರ್ಣಗೊಳಿಸುವ ಗುರಿ ಇಡಲಾಗಿದೆ.