* ಸಿಡ್ನಿಯಲ್ಲಿ ನಡೆದ ಭಾರತ ವಿರುದ್ಧದ ಐದನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ 6 ವಿಕೆಟ್ಗಳಿಂದ ಗೆದ್ದುಕೊಂಡಿದೆ. 5 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿಯನ್ನು 3-1 ರಿಂದ ಆಸ್ಟ್ರೇಲಿಯಾ ವಶಪಡಿಸಿಕೊಂಡಿದೆ.* ಕಾಂಗೂರು ಪಡೆ 10 ವರ್ಷಗಳ ಬಳಿಕ ಭಾರತ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆಸೀಸ್ 2014-15ರ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದು ದಾಖಲೆ ಬರೆದಿದ್ದು, ಭಾರತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಿಂದಲೂ ಹೊರಬಿದ್ದಿದೆ.* ಅಡಿಲೇಡ್, ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ಭಾರತ ತಂಡವನ್ನು ಆಸ್ಟ್ರೇಲಿಯಾ ಬೌಲರ್ಗಳು ಕಟ್ಟಿ ಹಾಕುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಐತಿಹಾಸಿಕ ಗೆಲುವಿನೊಂದಿಗೆ ಕಾಂಗರೂ ಪಡೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯೂಟಿಸಿ) ಫೈನಲ್ಗೆ ಲಗ್ಗೆ ಇಟ್ಟಿದೆ. * ಇದರೊಂದಿಗೆ ಭಾರತ ತಂಡಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ (ಡಬ್ಲ್ಯುಟಿಸಿ) ಫೈನಲ್ ಪ್ರವೇಶಿಸುವ ಹಾದಿಯು ಸಂಪೂರ್ಣವಾಗಿ ಮುಚ್ಚಿತು. ಇದೇ ಮೊದಲ ಬಾರಿ ಅರ್ಹತೆ ಗಿಟ್ಟಿಸಿರುವ ದಕ್ಷಿಣ ಆಫ್ರಿಕಾ ಮತ್ತು ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಜೂನ್ನಲ್ಲಿ ಇಂಗ್ಲೆಂಡ್ನ ಲಾರ್ಡ್ಸ್ನಲ್ಲಿ ಫೈನಲ್ನಲ್ಲಿ ಮುಖಾಮುಖಿಯಾಗಲಿವೆ.* ಸಿಡ್ನಿ ಟೆಸ್ಟ್ ಪಂದ್ಯದ ಮೂರನೇ ದಿನವಾದ ಭಾನುವಾರ ಭಾರತ ತಂಡದ ಹಂಗಾಮಿ ನಾಯಕ ಜಸ್ಪ್ರೀತ್ ಬುಮ್ರಾ ಅವರು ಬ್ಯಾಟಿಂಗ್ ಮಾಡಿದರು. ಬೆನ್ನುನೋವಿನಿಂದಾಗಿ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 32 ವಿಕೆಟ್ ಪಡೆದಿರುವ ಬುಮ್ರಾ ಡ್ರೆಸ್ಸಿಂಗ್ ರೂಂನಲ್ಲಿ ಕುಳಿತುಕೊಳ್ಳಬೇಕಾಯಿತು. ಅವರ ಅನುಪಸ್ಥಿತಿಯಲ್ಲಿ, ಭಾರತ ತಂಡದ ಬೌಲಿಂಗ್ ಶಿಸ್ತುಬದ್ಧವಾಗಿ ಕಾಣಲಿಲ್ಲ.* ಭಾರತ ಮೊದಲ ಇನಿಂಗ್ಸ್ನಲ್ಲಿ 185 ರನ್ಗಳಿಗೆ ಆಲೌಟಾಯಿತು. ಸಿಡ್ನಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳು ಅಬ್ಬರಿಸಿದ್ದರೂ, ಬೌಲರ್ಗಳು ಸದ್ದು ಮಾಡಲಿಲ್ಲ. ಹೀಗಾಗಿ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ನಲ್ಲಿ 181 ರನ್ ಗಳಿಸಿತ್ತು. ಭಾರತ 4 ರನ್ಗಳ ಮುನ್ನಡೆ ಸಾಧಿಸಿತ್ತು. ಇದಾದ ಬಳಿಕ ಭಾರತ ಎರಡನೇ ಇನ್ನಿಂಗ್ಸ್ನಲ್ಲಿ 157 ರನ್ ಕಲೆ ಹಾಕಿತ್ತು. ಈ ಮೂಲಕ ಆಸ್ಟ್ರೇಲಯಾ ತಂಡಕ್ಕೆ ಭಾರತ 161 ರನ್ಗಳ ಗೆಲುವಿನ ಗುರಿ ನೀಡಿತು. ಕಾಂಗೂರು ಪಡೆ 4 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಗೆಲುವು ಸಾಧಿಸಿತು.