* ಆಸ್ಟ್ರೇಲಿಯಾದ ಎಡಗೈ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 35 ವರ್ಷದ ಸ್ಟಾರ್ಕ್ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ಮೇಲೆ ಹೆಚ್ಚು ಗಮನ ಹರಿಸಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ.* ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಅವರು 65 ಪಂದ್ಯಗಳಲ್ಲಿ 79 ವಿಕೆಟ್ ಪಡೆದಿದ್ದಾರೆ. ಆಸ್ಟ್ರೇಲಿಯಾದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಅವರು ಎರಡನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಆ್ಯಡಂ ಜಂಪಾ (130 ವಿಕೆಟ್) ಇದ್ದಾರೆ.* 2012ರಲ್ಲಿ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಸ್ಟಾರ್ಕ್, 2021ರ ಟಿ20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಸದಸ್ಯರಾಗಿದ್ದರು.* “ಟೆಸ್ಟ್ ಕ್ರಿಕೆಟ್ ಎಂದಿಗೂ ನನ್ನ ಮೊದಲ ಆದ್ಯತೆ. ಆದರೆ ಆಸ್ಟ್ರೇಲಿಯಾದ ಪರ ಟಿ20 ಕ್ರಿಕೆಟ್ ಆಡುವುದನ್ನು ಆನಂದಿಸಿದ್ದೇನೆ. ಮುಂದಿನ ಭಾರತದ ಟೆಸ್ಟ್ ಪ್ರವಾಸ, ಆಸೀಸ್ ಮತ್ತು 2027ರ ಏಕದಿನ ವಿಶ್ವಕಪ್ಗಾಗಿ ಕಾದಿದ್ದೇನೆ” ಎಂದು ಸ್ಟಾರ್ಕ್ ತಿಳಿಸಿದ್ದಾರೆ.* ಇತ್ತೀಚೆಗೆ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಮಾರ್ಕಸ್ ಸ್ಟೋಯಿನಿಸ್ ಸೇರಿದಂತೆ ಹಲವರು ನಿವೃತ್ತಿ ಘೋಷಿಸಿದ ಹಿನ್ನೆಲೆಯಲ್ಲಿ, ಸ್ಟಾರ್ಕ್ ಅವರ ನಿರ್ಧಾರವು ಆಸ್ಟ್ರೇಲಿಯಾ ಕ್ರಿಕೆಟ್ನ ತಲೆಮಾರಿನ ಬದಲಾವಣೆಯ ಭಾಗವಾಗಿದೆ.