* ಪ್ಯಾರಿಸ್‌ನಲ್ಲಿ ನಡೆದ 142ನೇ ಐಒಸಿ ಅಧಿವೇಶನದಲ್ಲಿ ರಿಲಯನ್ಸ್ ಫೌಂಡೇಶನ್‌ನ ಸಂಸ್ಥಾಪಕಿ ನೀತಾ ಅವರು ಶೇ 100ರಷ್ಟು ಮತಗಳನ್ನು ಪಡೆದು ಸರ್ವಾನುಮತದಿಂದ ಐಒಸಿ ಸದಸ್ಯೆಯಾಗಿ ಮರು ಆಯ್ಕೆಯಾಗಿದ್ದಾರೆ. 2016ರಲ್ಲಿ ರಿಯೊ ಒಲಿಂಪಿಕ್ಸ್‌ ವೇಳೆ ನೀತಾ ಅವರು ಐಒಸಿ ಸದಸ್ಯೆಯಾಗಿ ಆಯ್ಕೆಯಾಗಿದ್ದರು. * ನೀತಾ ಅಂಬಾನಿ ಅವರು ಐಒಸಿ ಮಂಡಳಿಗೆ ಸೇರಿದ್ದ ಭಾರತದ ಮೊದಲ ಮಹಿಳೆಯಾಗಿದ್ದಾರೆ.* ನೀತಾ ಅಂಬಾನಿ ಅವರು ''ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಸದಸ್ಯರಾಗಿ ಮರು ಆಯ್ಕೆಯಾಗಿರುವುದು ನನಗೆ ಸಿಕ್ಕ ದೊಡ್ಡ ಗೌರವವಾಗಿದೆ. ನನ್ನ ಮೇಲೆ ಇಟ್ಟ ನಂಬಿಕೆ ಹಾಗೂ ವಿಶ್ವಾಸಕ್ಕೆ ಐಒಸಿ ಅಧ್ಯಕ್ಷ ಬ್ಯಾಚ್ ಮತ್ತು ನನ್ನ ಎಲ್ಲ ಸಹೋದ್ಯೋಗಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಈ ಮರುಚುನಾವಣೆಯು ಕೇವಲ ವೈಯಕ್ತಿಕ ಮೈಲಿಗಲ್ಲು ಮಾತ್ರವಲ್ಲದೇ ಜಾಗತಿಕ ಕ್ರೀಡಾ ಕ್ಷೇತ್ರದಲ್ಲಿ ಭಾರತದ ಬೆಳೆಯುತ್ತಿರುವ ಪ್ರಭಾವದ ಗುರುತಿಸುವಿಕೆಯಾಗಿದೆ. ನಾನು ಸಂತೋಷ ಮತ್ತು ಹೆಮ್ಮೆಯ ಕ್ಷಣವನ್ನು ಪ್ರತಿಯೊಬ್ಬ ಭಾರತೀಯನೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಭಾರತವೂ ಸೇರಿದಂತೆ ವಿಶ್ವದಾದ್ಯಂತ ಒಲಿಂಪಿಕ್ ಸಂಭ್ರಮ ಹೆಚ್ಚಿಸಲು ಬಯಸುತ್ತೇನೆ'' ಎಂದಿದ್ದಾರೆ.* ನೀತಾ ಅಂಬಾನಿಯವರು ಅವರು ಕ್ರೀಡೆ, ಶಿಕ್ಷಣ, ಆರೋಗ್ಯ, ಕಲೆ ಮತ್ತು ಸಂಸ್ಕೃತಿಯಾದ್ಯಂತ ವಿವಿಧ ಉಪಕ್ರಮಗಳನ್ನು ನಡೆಸುತ್ತಿದ್ದಾರೆ. ಇವೆಲ್ಲವೂ ದೇಶಾದ್ಯಂತ ಜನರ ಜೀವನವನ್ನು ಸುಧಾರಿಸುವ ಗುರಿಯನ್ನು ಹೊಂದಿವೆ.* ಒಲಿಂಪಿಕ್ ಗೇಮ್ಸ್ ಪ್ಯಾರಿಸ್ 2024 ಈ ವರ್ಷ ಜುಲೈ 26 ರಿಂದ ಆಗಸ್ಟ್ 11 ರವರೆಗೆ ಫ್ರಾನ್ಸ್‌ನ ರಾಜಧಾನಿಯಲ್ಲಿ ನಡೆಯಲಿದೆ.