* ಆಸ್ಟ್ರೇಲಿಯಾದ ಏಕದಿನ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಫ್ರಾಂಚೈಸ್ ಮಾರ್ಚ್ 4 ರಂದು ಘೋಷಿಸಿತು.* 2023 ಡಿಸೆಂಬರ್ ನಲ್ಲಿ ನಡೆದ ಐಪಿಎಲ್ ಆಟಗಾರರ ಹರಾಜಿನಲ್ಲಿ 20.50 ಕೋಟಿ ರೂ.ಗೆ 30 ವರ್ಷ ವಯಸ್ಸಿನ ಕಮಿನ್ಸ್ ಅವರನ್ನು ಸನ್ ರೈಸರ್ಸ್ ಹೈದರಾಬಾದ್ ತೆಕ್ಕೆಗೆ ಸೇರಿದ್ದು, ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ ಎರಡನೇ ದುಬಾರಿ ಆಟಗಾರ ಎನಿಸಿಕೊಂಡಿದ್ದರು.* ಪ್ಯಾಟ್ ಕಮಿನ್ಸ್ ಅವರ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ 2024 ರ ಆವೃತ್ತಿಯು ತನ್ನ ಮೊದಲ ಪಂದ್ಯವನ್ನು ಮಾರ್ಚ್ 23 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಆಡಲಿದ್ದಾರೆ.* ಕಮಿನ್ಸ್ ಅವರು ದಕ್ಷಿಣ ಆಫ್ರಿಕಾದ ಐಡೆನ್ ಮರ್ಕ್ರಮ್ ರಿಂದ ನಾಯಕತ್ವದ ಹೊಣೆ ವಹಿಸಿಕೊಳ್ಳಲಿದ್ದಾರೆ. ಮರ್ಕ್ರಮ್ ಅವರು 2023ರ ಆವೃತ್ತಿಯ ಐಪಿಎಲ್ ನಲ್ಲಿ ಹೈದರಾಬಾದ್ ತಂಡದ ನಾಯಕತ್ವವಹಿಸಿದ್ದರು. * ಕಮಿನ್ಸ್ ಅವರು ಈ ಹಿಂದೆ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಪರ ಆಡಿದ್ದರು.