* ಭಾರತೀಯ ಮೂಲದ ಐರ್ಲೆಂಡ್‌ನ ಪ್ರಧಾನಿ ಲಿಯೋ ವರದ್ಕರ್ ರಾಜೀನಾಮೆಯ ನಂತರ 37 ನೇ ವಯಸ್ಸಿನ ಸೈಮನ್ ಹ್ಯಾರಿಸ್ ಅವರು ಐರ್ಲೆಂಡ್‌ನ ನೂತನ ಪ್ರಧಾನಿಯಾಗಿ ನೇಮಕಗೊಂಡಿದ್ದಾರೆ. ಐರ್ಲೆಂಡ್‌ನ ಅತ್ಯಂತ ಕಿರಿಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಹ್ಯಾರಿಸ್ ಪಾತ್ರರಾಗಿದ್ದಾರೆ.   * ಸಂಸತ್ತಿನಲ್ಲಿ ಮತದಾನದ ಮೂಲಕ ಶಾಸಕ ಹ್ಯಾರಿಸ್ ಐರ್ಲೆಂಡ್‌ನ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. * X ನ ಪೋಸ್ಟ್‌ನಲ್ಲಿ ಮೋದಿ “ಐರ್ಲೆಂಡ್‌ನ ಅತ್ಯಂತ ಕಿರಿಯ ಪ್ರಧಾನಿಯಾಗಿದಕ್ಕಾಗಿ ಸೈಮನ್ ಹ್ಯಾರಿಸ್ ಅವರಿಗೆ ಅಭಿನಂದನೆಗಳು. ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ಹಂಚಿಕೊಂಡ ನಂಬಿಕೆಯ ಆಧಾರದ ಮೇಲೆ ನಮ್ಮ ಐತಿಹಾಸಿಕ ಸಂಬಂಧಗಳನ್ನು ಹೆಚ್ಚು ಗೌರವಿಸಲಾಗುತ್ತದೆ. ಭಾರತ-ಐರ್ಲೆಂಡ್ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ” ಎಂದು ಮೋದಿ ಹೇಳಿದ್ದಾರೆ.