* ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಸೆಪ್ಟೆಂಬರ್ 06 ರಂದು ಏಕದಿನ ಬ್ಯಾಟರ್ ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತದ ಸ್ಟಾರ್ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅವರು 750 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೆ ಏರಿದ್ದಾರೆ.* ಏಷ್ಯಾ ಕಪ್ 2023 ರಲ್ಲಿ ಉತ್ತಮ ಪ್ರದರ್ಶನ ತೋರಿದ ಶುಭಮನ್ ಗಿಲ್ ಮತ್ತು ಇಶಾನ್ ಕಿಶನ್ ಅವರು ICC ODI ಶ್ರೇಯಾಂಕದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.* ಏಕದಿನ ಬ್ಯಾಟರ್ ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಆಜಮ್ ಅವರು 882 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ರಸ್ಸಿ ವಾನ್ ಡರ್ ದುಸ್ಸಾನ್ ಅವರು 777 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.