Job Description: * ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿ ಗೆ ಫೆ.10 ರಂದು ಚಾಲನೆ ಸಿಗಲಿದೆ. ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡವು ಐದು ಬಾರಿ ಚಾಂಪಿಯನ್ ಆಗಿದೆ. ಈಗ ಭಾರತ ಮಹಿಳಾ ಕ್ರಿಕೆಟ್ ತಂಡವು ಪ್ರಥಮ ಬಾರಿಗೆ ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿದೆ. ಉದ್ಘಾಟನಾ ಪಂದ್ಯದಲ್ಲಿ ಅಥಿತೇಯ ತಂಡ ದಕ್ಷಿಣ ಆಫ್ರಿಕಾದ ವಿರುದ್ಧ ಶ್ರೀಲಂಕಾ ತಂಡವು ಪೈಪೋಟಿಗಿಳಿಯಿಯಲಿದೆ. * 10 ತಂಡಗಳನ್ನು ಎರಡು ಗುಂಪುಳನ್ನಾಗಿ ವಿಂಗಡಿಸಲಾಗಿದೆ. ಎಲ್ಲ ತಂಡಗಳು ರೌಂಡ್ ರಾಬಿನ್ ಲೀಗ್ ನಲ್ಲಿ ಆಡಲಿದ್ದು, ಪ್ರತಿ ಗುಂಪಿನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಫೈನಲ್ ಗೆ ಪ್ರವೇಶಿಸಲಿದೆ. ಫೈನಲ್ ಪಂದ್ಯವು ಫೆ.26 ರಂದು ನಡೆಯಲಿದೆ. - 'ಎ' ತಂಡಗಳು : ಆಸ್ಟ್ರೇಲಿಯಾ, ಬಾಂಗ್ಲಾದೇಶ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಶ್ರೀಲಂಕಾ - 'ಬಿ' ತಂಡಗಳು : ಭಾರತ, ಇಂಗ್ಲೆಂಡ್, ಐರ್ಲೆಂಡ್, ಪಾಕಿಸ್ತಾನ, ವೆಸ್ಟ್ ಇಂಡೀಸ್