* ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ರ‍್ಯಾಂಕಿಂಗ್ ನಲ್ಲಿ ಬೌಲರಗಳ ವಿಭಾಗದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದು, ಭಾರತದ 6ನೇ ಬೌಲರ್ ಹಾಗೂ 3ನೇ ವೇಗಿ ಎನಿಸಿಕೊಂಡಿದ್ದಾರೆ.* ಏಷ್ಯಾಕಪ್ ಫೈನಲ್ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಸಿರಾಜ್ 7 ಓವರ್ಗಳಲ್ಲಿ 21 ರನ್ ನೀಡಿ 6 ವಿಕೆಟ್ ಕಬಳಿಸಿ ಐಸಿಸಿ ಬೌಲರ್ಗಳ ಶ್ರೇಯಾಂಕ ಪಟ್ಟಿಯಲ್ಲಿ 8 ಸ್ಥಾನ ಮೇಲೇರಿದ್ದಾರೆ.* ಕಳೆದ ಬಾರಿಯ ಶ್ರೇಯಾಂಕ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ 9ನೇ ಸ್ಥಾನದಲ್ಲಿದ್ದರು ಸಿರಾಜ್ ಈ ಬಾರಿ 8 ಸ್ಥಾನ ಜಿಗಿತ ಕಂಡಿದ್ದಾರೆ. ಈ ಮೂಲಕ ಒಟ್ಟು 694 ರೇಟಿಂಗ್ ಪಡೆದು ಅಗ್ರಸ್ಥಾನ ಅಲಂಕರಿಸಿದ್ದಾರೆ.* ಆಸ್ಟ್ರೇಲಿಯಾ ವೇಗಿ ಹ್ಯಾಝಲ್ವುಡ್ ಅವರು ಈ ಬಾರಿ ಒಟ್ಟು 678 ರೇಟಿಂಗ್ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.