* ಭಾರತದಿಂದ ರಫ್ತಾಗುವ ಬಾಸ್ಮತಿ ಅಕ್ಕಿಯನ್ನು ಹೊರತುಪಡಿಸಿ ಇತರ ಬಗೆಯ ಅಕ್ಕಿ ರಪ್ತನ್ನು ಕೇಂದ್ರ ಸರ್ಕಾರವು ಜುಲೈ 20 (ಗುರುವಾರ) ರಂದು ನಿಷೇಧಿಸಿದೆ. * ದೇಶದಲ್ಲಿ ಅಕ್ಕಿಯ ಪೂರೈಕೆ ಹೆಚ್ಚಿಸುವ ಹಾಗೂ ಮುಂಬರುವ ಹಬ್ಬಗಳ ಸಂದರ್ಭದಲ್ಲಿ ರಿಟೇಲ್‌ ಮಾರುಕಟ್ಟೆಯಲ್ಲಿ ಬೆಲೆಯನ್ನು ನಿಯಂತ್ರಣದಲ್ಲಿ ಇರಿಸುವ ಉದ್ದೇಶದಿಂದ ಕೇಂದ್ರವು ಈ ಕ್ರಮಗಳನ್ನೂ ಕೈಗೊಂಡಿದೆ.* ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ 15.54 ಲಕ್ಷ ಟನ್ ಅಕ್ಕಿಯನ್ನು ರಫ್ತು ಮಾಡಲಾಗಿದೆ.* ಭಾರತದಿಂದ ರಫ್ತಾಗುವ ಅಕ್ಕಿಯಲ್ಲಿ ಹೆಚ್ಚಿನ ಪಾಲು ಇರುವುದು ಬಾಸ್ಮತಿ ಅಕ್ಕಿ ಮತ್ತು ಕುಚ್ಚಿಲಕ್ಕಿಯದಾಗಿದ್ದು, ರೈತರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಿಗುತ್ತಿರುವ ಆಕರ್ಷಕ ಬೆಳೆಯ ಪ್ರಯೋಜನ ದೊರೆಯಲಿದೆ ಎಂದು ಸಚಿವಾಲಯ ತಿಳಿಸಿದೆ.