* ಅಮೆರಿಕದ ನೆಲದಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯ ವಲಸಿಗರ ಗಡಿಪಾರು ಪ್ರಕ್ರಿಯೆಯನ್ನು ಅಮೆರಿಕ ಆರಂಭಿಸಿದ್ದು, ಮೊದಲ ಬ್ಯಾಚ್ನಲ್ಲಿ 104 ಮಂದಿಯನ್ನು ಹೊತ್ತ ಅಮೆರಿಕದ ವಾಯುಪಡೆ ವಿಮಾನವು ಬುಧವಾರ(ಫೆ.05) ಅಮೃತಸರಕ್ಕೆ ಬಂದಿಳಿದಿದೆ.* ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯ ಕೆಲವೇ ದಿನಗಳ ಮುನ್ನ ಈ ಬೆಳವಣಿಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಎರಡು ವಾರಗಳ ನಂತರ ಅಕ್ರಮ ವಲಸಿಗರ ಮೊದಲ ತಂಡವನ್ನು ಭಾರತಕ್ಕೆ ಗಡಿಪಾರು ಮಾಡಲಾಗಿದೆ.* ಮೊದಲ ತಂಡದಲ್ಲಿ ಗಡಿಪಾರು ಆಗಿರುವ 104 ಮಂದಿಯ ಪೌರತ್ವವನ್ನು ಭಾರತವು ದೃಢಪಡಿಸಿದೆ. ಭಾರತದ ರಾಯಭಾರ ಕಚೇರಿಯ ಅಧಿಕಾರಿಗಳು ಪ್ರತಿಯೊಬ್ಬ ವಲಸಿಗರ ಗುರುತನ್ನು ಪರಿಶೀಲಿಸಿದ್ದಾರೆ. ಗಡಿಪಾರು ಪ್ರಕ್ರಿಯೆಯಲ್ಲಿ ಭಾರತವು ಅಮೆರಿಕಕ್ಕೆ ಸಹಕಾರ ನೀಡುತ್ತಿರುವುದನ್ನು ಈ ಬೆಳವಣಿಗೆ ಸೂಚಿಸುತ್ತದೆ.* ಭಾರತವು ಅಕ್ರಮ ವಲಸೆಗೆ ವಿರೋಧ ವ್ಯಕ್ತಪಡಿಸಿದ್ದು, ಅಮೆರಿಕದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಭಾರತೀಯ ಪ್ರಜೆಗಳನ್ನು ಭಾರತಕ್ಕೆ ಕರೆಸಿಕೊಳ್ಳಲು ಸಿದ್ಧವಿದೆ, ಆದರೆ ಸೂಕ್ತ ದಾಖಲೆಗಳನ್ನು ನೀಡಬೇಕಾಗುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿತ್ತು.* ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, "ನಮ್ಮೊಂದಿಗೆ ದಾಖಲೆಗಳನ್ನು ಹಂಚಿಕೊಂಡರೆ, ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಲು ಸಾಧ್ಯವಾಗುತ್ತದೆ ಮತ್ತು ನಿಜವಾಗಿಯೂ ಭಾರತೀಯರೇ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು"ಎಂದು ತಿಳಿಸಿದ್ದಾರೆ.