* ಉಕ್ಕಿನ ಮನುಷ್ಯ ಎಂದೇ ಖ್ಯಾತಿಯಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವಾದ ಅಕ್ಟೋಬರ್ 31 ಅನ್ನು ಪ್ರತಿ ವರ್ಷ ರಾಷ್ಟ್ರೀಯ ಏಕಾಂತ ದಿನವನ್ನಾಗಿ ಆಚರಿಸಲಾಗುತ್ತದೆ.* ದೇಶದ ಏಕತೆಗಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ನಡೆಸಿದ ಹೋರಾಟ ಮತ್ತು ಅವರು ನೀಡಿದ ಸಂದೇಶವನ್ನು ಸಾರುವ ಜೊತೆಗೆ ಪಟೇಲ್ ಅವರಿಗೆ ಸೂಕ್ತ ಗೌರವ ನೀಡಲು ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ಕರೆ ಕೊಟ್ಟರು. ಅಂದಿನಿಂದ ಪ್ರತಿವರ್ಷ ಅ. 31ರಂದು ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ದೇಶದ ಎಲ್ಲ ಪ್ರಜೆಗಳು, ದೇಶದ ಒಳಿತಿಗಾಗಿ ಒಗ್ಗೂಡಿ ಕೆಲಸ ಮಾಡುವುದು ಈ ದಿನದ ಆಚರಣೆಯ ಉದ್ದೇಶವಾಗಿದೆ * 2018ರಲ್ಲಿ ಪಟೇಲ್ ಅವರ 182 ಮೀಟರ್ ಉದ್ದದ ಉಕ್ಕಿನ ಪ್ರತಿಮೆಯನ್ನು ಅಹಮದಾಬಾದ್ ನಿಂದ 200 ಕಿ.ಮೀ. ದೂರದಲ್ಲಿರುವ ಸರ್ದಾರ್ ಸರೋವರ ಆಣೆಕಟ್ಟಿನ ಬಳಿ ನಿರ್ಮಿಸಲಾಗಿದೆ. * ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ಏಕತಾ ನಗರದಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ಜಲ ಅರ್ಚನೆ ಮತ್ತು ಪುಷ್ಪಾರ್ಚನೆ ಮಾಡಿದರು.