* ಅಮೆರಿಕದ ಮಾಜಿ ಅಧ್ಯಕ್ಷ ಹಾಗೂ ನೊಬೆಲ್ ಪ್ರಶಸ್ತಿ ವಿಜೇತ ಜಿಮ್ಮಿ ಕಾರ್ಟರ್ ಅವರು 100 ನೇ ವಯಸ್ಸಿನಲ್ಲಿ ಜಾರ್ಜಿಯಾದ ಪ್ಲೇನ್ಸ್ ನಲ್ಲಿರುವ ಅವರ ನಿವಾಸದಲ್ಲಿ ಡಿಸೆಂಬರ್ 29 ರಂದು (ಭಾನುವಾರ) ನಿಧನರಾದರು ಎಂದು ಯುಎಸ್ ಮಾಧ್ಯಮವನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.* ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಮೂರನೇ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ ಕಾರ್ಟರ್ ಪುರಿ ಎಂದು ಹೆಸರಿಡಲಾಗಿದೆ. ಅಮೆರಿಕದ ಇತಿಹಾಸದಲ್ಲಿ ಅತ್ಯಂತ ಹೆಚ್ಚುಕಾಲ ಬದುಕಿದ ಅಧ್ಯಕ್ಷರಾಗಿದ್ದಾರೆ. * 1977ರಿಂದ 1981ರವರೆಗೆ ಜಿಮ್ಮಿ ಕಾರ್ಟರ್ ಅವರು ಅಮೆರಿಕ ಅಧ್ಯಕ್ಷರಾಗಿದ್ದರು. ಅವರ ಅವಧಿಯಲ್ಲಿ ಶೀತಲ ಸಮರ ಏರ್ಪಟ್ಟಿತ್ತು. ನಾಗರಿಕ ಹಕ್ಕುಗಳು ಹಾಗೂ ಲಿಂಗ ಸಮಾನತೆಯ ಹೋರಾಟವೂ ಅಮೆರಿಕ ಹಾಗೂ ವಿಶ್ವದಲ್ಲಿ ನಡೆದಿದ್ದವು. ಇರಾನ್ ಒತ್ತೆಯಾಳು ಬಿಕ್ಕಟ್ಟೂ ಇವರ ಕಾಲದಲ್ಲಾಗಿತ್ತು, ಈಜಿಪ್ಟ್ ಮತ್ತು ಇಸ್ರೇಲ್ ನಡುವಿನ 1978ರ ಶಾಂತಿ ಒಪ್ಪಂದಕ್ಕೆ ಇವರು ಮಧ್ಯಸ್ಥಿಕೆ ವಹಿಸಿದ್ದರು. * ಬಡದೇಶಗಳಿಗಾಗಿ ಇವರು ಅನೇಕ ಮಾನವೀಯ ನೆರವು ನೀಡಿದ್ದರು. ಈ ಕಾರಣಕ್ಕೆ 2002ರಲ್ಲಿ ಇವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿತ್ತು.* ಜಿಮ್ಮಿ ಕಾರ್ಟರ್ ಅವರು ಆಡಳಿತದ ಅವಧಿಯಲ್ಲಿ ಮಾಡಿರುವ ಅನೇಕ ಮಾನವೀಯ ಕೆಲಸಕ್ಕಾಗಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಗೆದ್ದ ಕಾರ್ಟರ್, ಇಸ್ರೇಲ್ ಮತ್ತು ಈಜಿಪ್ಟ್ ನಡುವೆ ಶಾಂತಿ ನೆಲೆಸಲು ಮಧ್ಯಸ್ಥಿಕೆ ವಹಿಸಿದ ಕೀರ್ತಿಗೂ ಕಾರ್ಟರ್ ಪಾತ್ರರಾಗಿದ್ದಾರೆ.* ಜಿಮ್ಮಿ ಕಾರ್ಟರ್ ಅವರು ಅಧ್ಯಕ್ಷರಾಗುವ ಮೊದಲು ಯುನೈಟೆಡ್ ಸ್ಟೇಟ್ಸ್ ನ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿದರು, ಬಳಿಕ ಜಾರ್ಜಿಯಾದ ಗವರ್ನರ್ ಆಗಿ ಸೇವೆಯನ್ನು ಸಲ್ಲಿಸಿದ್ದರು.* ಅಧ್ಯಕ್ಷರಾಗುವ ಮುನ್ನ ಕಾರ್ಟರ್ ಅವರು ಶೇಂಗಾ ಬೆಳೆಯುವ ರೈತನಾಗಿದ್ದರು ಹಾಗೂ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು. 7 ವರ್ಷ ಅಮೆರಿಕ ನೌಕಾಪಡೆಯಲ್ಲಿದ್ದು ನಂತರ ರಾಜಕೀಯಕ್ಕೆ ಬಂದಿದ್ದರು.