* ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ನವೆಂಬರ್ 05 (ಮಂಗಳವಾರ)ರಿಂದ ಎರಡು ದಿನಗಳ ಕಾಲ ನಡೆದ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರ ವಿರುದ್ಧ ಯುಎಸ್ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಎರಡನೇ ಭಾರಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ. * ಶ್ವೇತಭವನವನ್ನು ಗೆಲ್ಲಲು ಅಗತ್ಯವಿರುವ 270 ಚುನಾವಣಾ ಮತಗಳಲ್ಲಿ ಟ್ರಂಪ್ ಅವರು 277 ಎಲೆಕ್ಟೊರಲ್ ಮತಗಳನ್ನು ಗೆದ್ದಿದ್ದಾರೆ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರ ವಿರುದ್ದ ಟ್ರಂಪ್ ಗೆಲುವು ಸಾಧಿಸಿದ್ದಾರೆ. * ಅಮೆರಿಕದ 47ನೇ ಅಧ್ಯಕ್ಷರಾಗಿ ಟ್ರಂಪ್ ಅವರು ಅಧಿಕಾರವಹಿಸಿಕೊಳ್ಳಲಿದ್ದಾರೆ. ಬಹುಮತಕ್ಕೆ 270 ಸ್ಥಾನಗಳು ಅವಶ್ಯಕ ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ 538 ಕ್ಷೇತ್ರಗಳಲ್ಲಿ ನಡೆದ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರ ನೇತೃತ್ವದ ರಿಪಬ್ಲಿಕನ್ ಪಕ್ಷ  277 ಇನ್ನೂ ಡೆಮಾಕ್ರೆಟಿಕ್ ಪಕ್ಷದ ಕಮಲಾ ಹ್ಯಾರಿಸ್ 224 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. * ಬಹುತೇಕ ಫಲಿತಾಂಶ ನಿರ್ಧಾರವಾಗಿರುವುದರಿಂದ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಐತಿಹಾಸಿಕ ಭಾಷಣ ಮಾಡಿದ್ದಾರೆ. ಟ್ರಂಪ್ ಅವರ ಪ್ರಮಾಣ ವಚನವು ಅಧಿಕೃತವಾಗಿ ಜನವರಿ 20, 2025 ರಂದು ನಡೆಯಲಿದೆ.