* ಕಲ್ಪತರುನಾಡಿನ ಜನರು, ಕ್ರೀಡಾಪಟುಗಳು ಹಾಗೂ ಕ್ರೀಡಾಪ್ರೇಮಿಗಳ ಹಲವು ವರ್ಷಗಳ ಬೇಡಿಕೆಯಾಗಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 2 ರಂದು ಶಿಲಾನ್ಯಾಸ ನೆರವೇರಿಸುವ ಮೂಲಕ ಚಾಲನೆ ನೀಡಿದರು.* ನಗರದ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಇರುವ ಪಿ.ಗೊಲ್ಲಹಳ್ಳಿ-ಸೋರೆಕುಂಟೆ ಬಳಿ ಸುಮಾರು 50 ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಿದರು.* ಬ್ಯಾಟಿಂಗ್ ಮಾಡುವ ಮೂಲಕ ತುಮಕೂರಿ ಜಿಲ್ಲೆಯ ಸೋರೆಕುಂಟೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. * ಸುಮಾರು 150 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡಲಾಗುತ್ತಿದೆ. ಕೆಐಎಡಿಬಿ ವತಿಯಿಂದ ಕೆಎಸ್ಸಿಎನವರು 50 ಎಕರೆ ಭೂಮಿಯನ್ನು ಖರೀದಿಸಿದ್ದು, ಮುಂದಿನ ಎರಡು ವರ್ಷದೊಳಗೆ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗಲಿದೆ ಎಂದರು.