* ಆಸ್ಟ್ರೇಲಿಯಾದ ಅನುಭವಿ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅವರು ಜೂನ್ 25 ರಂದು (ಮಂಗಳವಾರ) 2024ರ ಟಿ20 ವಿಶ್ವಕಪ್ ಟೂರ್ನಿಯಿಂದ ಆಸ್ಟ್ರೇಲಿಯಾ ಹೊರಬಂದ ಬೆನ್ನಲ್ಲೇ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. * 15 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ. ಈ ವರ್ಷದ ಜನವರಿಯಲ್ಲಿ ಟೆಸ್ಟ್‌ ಹಾಗೂ ಏಕದಿನ ಕ್ರಿಕೆಟ್‌ಗೂ ವಾರ್ನರ್‌ ಅವರು ವಿದಾಯ ತಿಳಿಸಿದ್ದಾರೆ.* ಅನುಭವಿ ಬ್ಯಾಟರ್ ಡೇವಿಡ್ ವಾರ್ನರ್ ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯನ್ನು ಅವರ ಸಹ ಆಟಗಾರ ಜೋಶ್ ಹ್ಯಾಜಲ್ವುಡ್ ಖಚಿತಪಡಿಸಿದ್ದಾರೆ. 2024 ರ ಟಿ20 ವಿಶ್ವಕಪ್ ತನ್ನ ಕೊನೆಯ ಅಂತರಾಷ್ಟ್ರೀಯ ನಿಯೋಜನೆ ಎಂದು ವಾರ್ನರ್ ಈಗಾಗಲೇ ದೃಢಪಡಿಸಿದ್ದರು.* ಅಂತಾರಾಷ್ಟ್ರೀಯ ಕ್ರಿಕೆಟ್ ಮಾತ್ರವಲ್ಲ, ಫ್ರಾಂಚೈಸಿ ಕ್ರಿಕೆಟ್‌ನಲ್ಲೂ ಡೇವಿಡ್ ವಾರ್ನರ್ ಅತ್ಯುತ್ತಮ ಬ್ಯಾಟರ್ ಆಗಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 10 ಸಾವಿರ ರನ್ ಗಳಿಸಿದ ನಾಲ್ಕನೇ ಬ್ಯಾಟರ್ ಆಗಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿ ಕಪ್ ಗೆದ್ದುಕೊಟ್ಟಿದ್ದಾರೆ.* 2024 ರ ಆರಂಭದಲ್ಲಿ ಪಾಕಿಸ್ತಾನದ ವಿರುದ್ಧ ಅವರ ಅಂತಿಮ ಟೆಸ್ಟ್ ಪಂದ್ಯವನ್ನು ಆಡಿದರು. ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಆಡಿದ್ದೇ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಲಿದೆ.