* ವೆಸ್ಟ್ ಇಂಡೀಸ್‌ನ ಅನುಭವಿ ಆಟಗಾರ ಶಾನನ್ ಗೇಬ್ರಿಯಲ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.* 2012ರಲ್ಲಿಇಂಗ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ಪರ ಗೇಬ್ರಿಯಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು.12 ವರ್ಷಗಳ ಕಾಲ ದೇಶಕ್ಕಾಗಿ ಆಡಿದ ಅವರು ನಿಲ್ಲಿಸಲು ನಿರ್ಧರಿಸಿದ್ದಾರೆ.* ಶಾನನ್ ಗೇಬ್ರಿಯಲ್ ವೆಸ್ಟ್ ಇಂಡೀಸ್ ಪರ ಒಟ್ಟು 86 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 59 ಟೆಸ್ಟ್ ಪಂದ್ಯಗಳ 104 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಅವರು 32.21 ಸರಾಸರಿಯಲ್ಲಿ 166 ವಿಕೆಟ್ ಕಬಳಿಸಿ ಮಿಂಚಿದ್ದರು.* 25 ಏಕದಿನ ಪಂದ್ಯಗಳಲ್ಲಿ 1148 ಎಸೆತಗಳನ್ನು ಎಸೆದಿರುವ ಶಾನನ್ 33 ವಿಕೆಟ್ ಕಬಳಿಸಿದ್ದಾರೆ. 25 ODI ಮತ್ತು ಎರಡು T20 ಗಳಲ್ಲಿ ಒಟ್ಟು 202 ವಿಕೆಟ್ಗಳನ್ನು ಪಡೆದಿದ್ದಾರೆ. 2023 ರಲ್ಲಿ ಭಾರತದ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವಾಡಿದ್ದ ಶಾನನ್ ಗೇಬ್ರಿಯಲ್ ಇದೀಗ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.* ಕಳೆದ 12 ವರ್ಷಗಳ ಕಾಲ ವೆಸ್ಟ್ ಇಂಡೀಸ್ ಪರ ಅಂತರಾಷ್ಟ್ರೀಯ ಕ್ರಿಕೆಟ್ ಆಡಲು ನನ್ನನ್ನು ಅರ್ಪಿಸಿಕೊಂಡಿದ್ದೇನೆ. ವಿಂಡೀಸ್ ಪರ ಅತ್ಯುನ್ನತ ಮಟ್ಟದಲ್ಲಿ ಆಡಿರುವುದು ನನಗೆ ಅಪಾರ ಸಂತೋಷವನ್ನು ತಂದಿದೆ. ಆದರೆ ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು. ಅದರಂತೆ ನಾನು ಸಹ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು ಶಾನನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.