* ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಯಾವುದೇ ಮುನ್ಸೂಚನೆ ನೀಡದೆ ದಿಢೀರ್ ಆಗಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾದ ಅತ್ಯಂತ ಯಶಸ್ವಿ ನಾಯಕಿ ಎನಿಸಿಕೊಂಡಿರುವ ಇವರು ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಕ್ರಿಕೆಟ್‌ನಿಂದ ಅನಿರ್ದಿಷ್ಟ ವಿರಾಮವನ್ನು ಪಡೆದುಕೊಂಡಿದ್ದರು.*  ಆಸ್ಟ್ರೇಲಿಯಾಗೆ ಬರೋಬ್ಬರಿ ಏಳು ವಿಶ್ವಕಪ್‌ ಟ್ರೋಫಿಗಳನ್ನು ಗೆದ್ದುಕೊಟ್ಟ ಕಾಂಗರೂ ವನಿತೆಯರ ಕ್ರಿಕೆಟ್‌ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿಸುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ ದಾಖಲೆಯ 241 ಪಂದ್ಯಗಳನ್ನಾಡಿರುವ ಅವರು, ಯಶಸ್ವಿ ವೃತ್ತಿಬದುಕಿಗೆ ವಿದಾಯ ಹೇಳಿದ್ದಾರೆ. 31 ನೇ ವಯಸ್ಸಿನಲ್ಲಿ ಕ್ರಿಕೆಟ್‌ನಿಂದ ನಿವೃತ್ತರಾದರು. ಅವರು ತಮ್ಮ ರಾಷ್ಟ್ರಕ್ಕಾಗಿ ಎಲ್ಲಾ ಸ್ವರೂಪಗಳಲ್ಲಿ 8,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.