* ಇಂಗ್ಲೆಂಡ್‌ ತಂಡದ ಆಲ್‌ರೌಂಡರ್‌ ಮೊಯಿನ್ ಅಲಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.*  37 ವರ್ಷದ ಅಲಿ ಅವರನ್ನು ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ವೈಟ್-ಬಾಲ್ ಸರಣಿಗೆ ಕಡೆಬಹುಮುಖ ಇಂಗ್ಲೆಂಡ್ ಆಲ್ ರೌಂಡರ್ ಮೊಯಿನ್ ಅಲಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ.* ಮೊಯಿನ್ ಅಲಿ ಅವರು 2014ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಅವರು ಒಟ್ಟು 298 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಎಲ್ಲಾ ಮಾದರಿಗಳಲ್ಲೂ 6,678 ರನ್ ಗಳಿಸಿದ್ದಾರೆ. ಜತೆಗೆ, 366 ವಿಕೆಟ್‌ಗಳನ್ನು ಪಡೆದಿದ್ದಾರೆ. 2019ರ ವಿಶ್ವಕಪ್ ಮತ್ತು 2022ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು* ಮೊಯಿನ್ ಅಲಿ ಅವರು ಇದೇ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ಪರ ಕಣಕ್ಕಿಳಿದಿದ್ದರು.* 'ನನಗೆ 37 ವರ್ಷ ವಯಸ್ಸಾಗಿದೆ. ಈ ತಿಂಗಳ ಆಸ್ಟ್ರೇಲಿಯಾ ಸರಣಿಗೂ ಆಯ್ಕೆಯಾಗಿಲ್ಲ. ನಾನು ಇಂಗ್ಲೆಂಡ್ ಪರವಾಗಿ ಸಾಕಷ್ಟು ಕ್ರಿಕೆಟ್ ಆಡಿದ್ದೇನೆ. ಇದು ಮುಂದಿನ ಪೀಳಿಗೆಗೆ ಅವಕಾಶ ನೀಡುವ ಸಮಯವಾಗಿದ್ದು, ನಿವೃತ್ತಿ ಘೋಷಿಸುವುದು ಸೂಕ್ತ ಸಮಯ' ಎಂದು ಮೊಯಿನ್ ಅಲಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಾರೆ.