* ರಾಜ್ಯದಲ್ಲಿ ಐದು ವರ್ಷದೊಳಗಿನ 1.3 ಲಕ್ಷಕ್ಕೂ ಅಧಿಕ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಕಿಅಂಶಗಳಿಂದ ತಿಳಿದುಬಂದಿದೆ.* ಈ ಪೈಕಿ 11,674 ತೀವ್ರತರ ಅಪೌಷ್ಟಿಕತೆ (SAM) ಯಿಂದ ಬಳಲುತ್ತಿದ್ದಾರೆಂದು ಈ ವರದಿ ತಿಳಿಸಿದೆ.* ಈ ಬೆಳವಣಿಗೆಗೆ ಬಜೆಟ್ ಕಡಿತ ಕೂಡ ಒಂದು ಕಾರಣವೆಂದು ಹೇಳಲಾಗುತ್ತಿದೆ. ಪೌಷ್ಠಿಕಾಂಶದ ಉಪಕ್ರಮಗಳನ್ನು ಬೆಂಬಲಿಸುವ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ (ICDS) ಕಾರ್ಯಕ್ರಮಕ್ಕಾಗಿ ಸರ್ಕಾರ ಹೆಚ್ಚಿನ ಅನುದಾನ ಮೀಸಲಿಡುತ್ತದೆ.* 2024 ರ ಬಜೆಟ್ನಲ್ಲಿ 300 ಕೋಟಿ ರೂ. ಕಡಿತ ಮಾಡಲಾಗಿದ್ದು. ಇದು ಸಮಸ್ಯೆ ಕಾರಣವೆಂದು ಹೇಳಲಾಗುತ್ತಿದೆ.* ರಾಜ್ಯದಲ್ಲಿನ 65,911 ಅಂಗನವಾಡಿ ಕೇಂದ್ರಗಲಿದ್ದು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 32.91 ಲಕ್ಷಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ.* ವಿಶ್ವ ಆರೋಗ್ಯ ಸಂಸ್ಥೆ (WHO) SAM ಅನ್ನು ಮಗುವಿನ ಎತ್ತರಕ್ಕೆ ಹೋಲಿಸಿದರೆ ಅತ್ಯಂತ ಕಡಿಮೆ ತೂಕವನ್ನು ಹೊಂದಿರುವ ಸ್ಥಿತಿ ಎಂದು ವಿವರಿಸಿದೆ.* MAM (moderate acute malnutrition) ಮತ್ತು SAM (severe acute malnutrition) ಎರಡೂ ಮಗುವಿನ ಆರೋಗ್ಯದ ಮೇಲೆ ತೀವ್ರವಾದ ಆರೋಗ್ಯ ಪರಿಣಾಮಗಳನ್ನು ಹೊಂದಿವೆ.* ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ತಮ್ಮ ಎತ್ತರಕ್ಕೆ ತುಂಬಾ ಕಡಿಮೆ ತೂಕವನ್ನು ಹೊಂದಿರುತ್ತಾರೆ ಮತ್ತು ಸಾವಿನ ಅಪಾಯಲ್ಲಿರುತ್ತಾರೆ .ಅವರ ದುರ್ಬಲ ಪ್ರತಿರಕ್ಷಣಾ ವ್ಯವಸ್ಥೆಯಿಂದಾಗಿ ರೋಗಗಳ ಸಂದರ್ಭದಲ್ಲಿ ಸಾಯುವ ಸಾಧ್ಯತೆ ಒಂಬತ್ತು ಪಟ್ಟು ಹೆಚ್ಚಿರುತ್ತದೆ.* ಅಪೌಷ್ಟಿಕತೆಯನ್ನು ಹೋಗಲಾಡಿಸಲು ಅಂಗನವಾಡಿ ಕೇಂದ್ರಗಳನ್ನು ಸರ್ಕಾರ ಬಳಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ತಜ್ಞರು ಹೇಳಿದ್ದಾರೆ.* ಮಕ್ಕಳಲ್ಲಿ ಉತ್ತಮ ಆರೋಗ್ಯವನ್ನು ಉತ್ತೇಜಿಸಲು ಸರ್ಕಾರ ಇತ್ತೀಚೆಗೆ ಅಂಗನವಾಡಿ ಊಟದಲ್ಲಿ ರಾಗಿ ಲಡ್ಡುಗಳು ಮತ್ತು ಖಿಚಡಿಯಂತಹ ಪೌಷ್ಟಿಕಾಂಶಗಳನ್ನು ಸೇರಿಸಿದೆ. ಆದರೆ, ಸಾಕಷ್ಟು ಮಕ್ಕಳು ಈ ಆಹಾರ ತಿನ್ನಲು ಇಷ್ಟಪಡುತ್ತಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆಯರು ಹೇಳಿದ್ದಾರೆ.