* 'ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್‌ ಉಪಕರಣಗಳ ತಯಾರಿಕೆಯಲ್ಲಿ ಭಾರತವು ಮುಂಚೂಣಿ ಸ್ಥಾನಕ್ಕೇರಲು ಅಗತ್ಯವಿರುವ ಎಲ್ಲಾ ಕ್ರಮಕೈಗೊಳ್ಳಲು ಸರ್ಕಾರ ಕೈಗೊಂಡಿದೆ' ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ಅವರು ಜೂನ್ 11 ರಂದು ತಿಳಿಸಿದ್ದಾರೆ.* ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾಗಿ ಜೂನ್ 12 ರಂದು (ಮಂಗಳವಾರ) ಅಧಿಕಾರ ವಹಿಸಿಕೊಂಡ ಬಳಿಕ 'ತಂತ್ರಜ್ಞಾನ ಮತ್ತು ಡಿಜಿಟಲ್ ವ್ಯವಸ್ಥೆಗೆ ಉತ್ತೇಜನ ನೀಡುವ ಮೂಲಕ ಜನರ ಜೀವನಮಟ್ಟದ ಸುಧಾರಣೆಗೆ ಅನುಕೂಲಕರ ವಾತಾವರಣ ಕಲ್ಪಿಸಲಾಗುವುದು' ಎಂದು ತಿಳಿಸಿದ್ದಾರೆ.* ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದ ಉಸ್ತುವಾರಿ ವಹಿಸಿಕೊಂಡ ವೈಷ್ಣವ್‌ ಅವರು ಮೋದಿ ಸರ್ಕಾರದ ಡಿಜಿಟಲ್ ಇಂಡಿಯಾ ಉಪಕ್ರಮಗಳು ಸಾಮಾನ್ಯ ಜನರನ್ನು ಸಶಕ್ತಗೊಳಿಸಿವೆ, ಜನ್ ಧನ್, ಆಧಾರ್ ಮತ್ತು ಇತರ ಸಕ್ರಿಯಗೊಳಿಸುವ ಕಾರ್ಯಕ್ರಮಗಳ ಮೂಲಕ ಪರಿವರ್ತಕ ಬದಲಾವಣೆಗಳನ್ನುತಂದಿವೆ.* 'ಕೃತಕ ಬುದ್ಧಿಮತ್ತೆ ತಂತ್ರಜ್ಞಾನ, ರೋಬೊಟಿಕ್ಸ್, ವರ್ಚುವಲ್ ರಿಯಾಲಿಟಿ ತಂತ್ರಜ್ಞಾನಕ್ಕೆ ಒತ್ತು ನೀಡುವ ಮೂಲಕ ಯುವಜನರ ಸಬಲೀಕರಣಕ್ಕೆ ಆದ್ಯತೆ ನೀಡಲಾಗುವುದು' ಎಂದು ತಿಳಿಸಿದರು.