* ಬಾಂಗ್ಲಾದೇಶದ ಆಲ್ರೌಂಡರ್ ಶಕೀಬ್ ಅಲ್ ಹಸನ್ ಟೆಸ್ಟ್ ಮತ್ತು ಟಿ20 ಕ್ರಿಕೆಟ್ಗೆ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.* ಬಾಂಗ್ಲಾದೇಶ್ ಪರ ಈವರೆಗೆ 70 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ 128 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 7454 ಎಸೆತಗಳನ್ನು ಎದುರಿಸಿರುವ ಅವರು 4600 ರನ್ ಕಲೆಹಾಕಿದ್ದಾರೆ.* 119 ಟೆಸ್ಟ್ ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ 15591 ಎಸೆತಗಳಲ್ಲಿ ಈ ವೇಳೆ 7707 ರನ್ಗಳನ್ನು ನೀಡಿ 242 ವಿಕೆಟ್ಗಳನ್ನು ಕಬಳಿಸಿದ್ದಾರೆ. ಇದೇ ವೇಳೆ 19 ಬಾರಿ 5 ವಿಕೆಟ್ಗಳನ್ನು ಕಬಳಿಸಿದ ಸಾಧನೆ ಮಾಡಿದ್ದಾರೆ. ವಿಕೆಟ್ಗಳನ್ನು ಕಬಳಿಸಿದ್ದಾರೆ. ಇದರ ನಡುವೆ 5 ಶತಕ, 1 ದ್ವಿಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ.* ಭಾರತದ ವಿರುದ್ಧದ ಕಾನ್ಪುರ ಟೆಸ್ಟ್ಗೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಕೀಬ್ ಮುಂಬರುವ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮೂಲಕ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳುವುದಾಗಿ ತಿಳಿಸಿದ್ದಾರೆ. ಅಲ್ಲದೆ ಇನ್ಮುಂದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಮುಂದುವರೆಯುವುದಿಲ್ಲ ಎಂದು ಸಹ ಹೇಳಿದ್ದಾರೆ.* 2024ರಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ನಾನು ಬಾಂಗ್ಲಾದೇಶ್ ಪರವಾಗಿ ನನ್ನ ಕೊನೆಯ ಟಿ20 ಪಂದ್ಯವನ್ನು ಆಡಿದ್ದೇನೆ. ಹೀಗಾಗಿ ಮುಂಬರುವ ದಿನಗಳಲ್ಲಿ ಬಾಂಗ್ಲಾ ಪರ ಚುಟುಕು ಕ್ರಿಕೆಟ್ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸುದೀರ್ಘಾವಧಿಯ ಕ್ರಿಕೆಟ್ನಲ್ಲಿ ನನ್ನ ಕೊನೆಯ ಪಂದ್ಯವನ್ನಾಡಲಿದ್ದೇನೆ ಎಂದು ಶಕೀಕ್ ಅಲ್ ಹಸನ್ ತಿಳಿಸಿದ್ದಾರೆ. * ಅಕ್ಟೋಬರ್-ನವೆಂಬರ್ ನಡುವೆ ಬಾಂಗ್ಲಾದೇಶ್ ತಂಡವು ಸೌತ್ ಆಫ್ರಿಕಾ ವಿರುದ್ಧ 2 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ ಸರಣಿಯಲ್ಲಿ ಮೀರತ್ನಲ್ಲಿ ಒಂದು ಪಂದ್ಯ ಜರುಗಲಿದ್ದು, ಈ ಮ್ಯಾಚ್ ಮೂಲಕ ಟೆಸ್ಟ್ ಕ್ರಿಕೆಟ್ಗೆ ಗುಡ್ ಬೈ ಹೇಳಲು ಶಕೀಬ್ ಅಲ್ ಹಸನ್ ನಿರ್ಧರಿಸಿದ್ದಾರೆ.