* ಶತಮಾನ ಹಿಂದೆ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಕೈಗೊಂಡ ನಿರ್ಣಯ. ಒಪ್ಪಂದಗಳು ದೇಶದಲ್ಲಿ ಸ್ವಾತಂತ್ರ್ಯ ಹೋರಾಟ ಚಳವಳಿಯ ದಿಕ್ಕನ್ನೇ ಬದಲಿಸಿತು.* ಈ ಅಧಿವೇಶನವನ್ನು ಸ್ಮರಣಿಯಗೊಳಿಸಲು ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿ ಸಜ್ಜಾಗಿದೆ.* ಬೆಳಗಾವಿಯ ಟಿಳಕವಾಡಿಯಲ್ಲಿ 1924ರ ಡಿಸೆಂಬರ್ 26 ಹಾಗೂ 27ರಂದು ನಡೆದ 39ನೇ ಕಾಂಗ್ರೆಸ್ ಅಧಿವೇಶದಲ್ಲಿ ಮಹಾತ್ಮ ಗಾಂಧೀಜಿ ಅವರು ಭಾಗಿಯಾಗಿದ್ದರು.* ಈ ಅಧಿವೇಶನಕ್ಕೆ 100 ವರ್ಷಗಳಾದ ಹಿನ್ನಲೆ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಶತಮಾನೋತ್ಸವ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಣೆ ಮಾಡುತ್ತಿದೆ. ಇಂದು ಮತ್ತು ನಾಳೆ (ಡಿ. 26 &27) ಎರಡು ದಿನಗಳ ಕಾಲ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ.* 39ನೇ ಕಾಂಗ್ರೆಸ್ ಅಧಿವೇಶವು ಶಾಂತಿ, ಸತ್ಯ, ಅಹಿಂಸೆಗಳ ಮೂಲಕ ದೇಶದಲ್ಲಿ ಸ್ವಾತಂತ್ರ್ಯ ಚಳವಳಿಗೆ ಹೊಸ ರೂಪ ಕೊಟ್ಟಿತು. ಅಲ್ಲದೆ, ಬೆಳಗಾವಿ ಅಧಿವೇಶನದ ಬಳಿಕ ಶಿವಪುರ ಧ್ವಜ ಸತ್ಯಾಗ್ರಹ, ಅಂಕೋಲಾ ಉಪ್ಪಿನ ಸತ್ಯಾಗ್ರಹ, ಅಸಹಕಾರ ಚಳವಳಿ ಹೀಗೆ ಅನೇಕ ಹೋರಾಟಗಳು ಗಾಂಧೀಜಿ ನೇತೃತ್ವದಲ್ಲಿ ನಡೆದವು.* ಅಧಿವೇಶನದಲ್ಲಿ ಗಾಂಧೀಜಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಡಾ. ಬಾಬು ರಾಜೇಂದ್ರ ಪ್ರಸಾದ್, ಮೋತಿಲಾಲ್ ನೆಹರು, ಜವಾಹರಲಾಲ್ ನೆಹರು ಸೇರಿ ಒಟ್ಟು 1844 ಪ್ರತಿನಿಧಿಗಳು ಪಾಲ್ಗೊಂಡಿದ್ದರು.* ಇಂದು ನಡೆಯುವ ಅಧಿವೇಶನಲ್ಲಿ ಸುಮಾರು 1.50 ಲಕ್ಷ ಜನ ಭಾಗವಹಿಸಲಿದ್ದಾರೆ. ಗಾಂಧೀಜಿ ಅಧ್ಯಕ್ಷತೆಯ ಐತಿಹಾಸಿಕ ಸಭೆಯ ಮರುಸೃಷ್ಟಿಸಲಾಗುತ್ತಿದ್ದು, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳನ್ನೂ ಗೌರವಿಸಲಾಗುತ್ತದೆ.